ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಿದ್ದು, ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಅ. 13ರವೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು,ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು ಮತ್ತು ಜೋರು ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕನ್ನಡ,ದಕ್ಷಿಣ ಕನ್ನಡ,ಉಡುಪಿ ಶಿವಮೊಗ್ಗ,ಚಿಕ್ಕಮಗಳೂರು, ಬೆಳಗಾವಿ, ದಾವಣಗೆರೆ, ಬಳ್ಳಾರಿಯಲ್ಲಿ ಅಕ್ಟೋಬರ್ 12 ರ ವರೆಗೆ ಮಳೆ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿಯೂ ಮುಂದಿನ ಎರಡು ದಿನ ಮಳೆಯ ಮುನ್ಸೂಚನೆ ನೀಡಲಾಗಿದೆ.



