ಗದಗ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಕಂಟಕ ಎದುರಾಗಿದೆ. ಇದರ ಮಧ್ಯ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಅವರು ಸ್ಫೋಟಕ ಭವಿಷ್ಯ ನುಡಿದ್ದು, ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ಹೇಳಿದ್ದಾರೆ
ಗದಗದ ಲಕ್ಷ್ಮೇಶ್ವರ ಮುಕ್ತಿಮಂದಿರ ಕ್ಷೇತ್ರದಲ್ಲಿ ನಡೆದ ರಂಭಾಪುರಿ ವೀರಗಂಗಾಧರ ಜಗದ್ಗುರುರುಗಳ 42 ವರ್ಷದ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಮಾತನಾಡಿ, ಲಕ್ಷ್ಮೇಶ್ವರದ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ನನೆಗುದಿಗೆ ಬಿದ್ದಿದೆ.ಲಿಂಗ ಸ್ಥಾಪನೆಗೆ ಸುಮಾರು 15 ಕೋಟಿ ರೂ. ಆದ್ರು ಹಣ ಬೇಕು. ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಗಮನಕ್ಕೆ ತರಲಾಗಿದೆ.
ವೀರಗಂಗಾಧರ ಜಗದ್ಗುರುಗಳ ಮೇಲೆ ಡಿಕೆಶಿ ಅಪಾರವಾದ ಭಕ್ತಿ ನಂಬಿಕೆ ಹೊಂದಿದ್ದಾರೆ. ಮುಕ್ತಿಮಂದಿರ ಕ್ಷೇತ್ರದಲ್ಲಿ ತ್ರಿಕೋಟಿ ಲಿಂಗಗಳ ಸ್ಥಾಪನೆ ಅಷ್ಟೇ ಅಲ್ಲ. ಡಿಕೆಶಿಯನ್ನ ಮುಖ್ಯಮಂತ್ರಿ ಮಾಡಿ ಈ ಜಾಗದಲ್ಲಿ ಕರೆದುಕೊಂಡು ಬಂದು ಪೂಜೆ ಮಾಡಿ ತೋರಿಸುತ್ತೇನೆ ಎಂದು ಶ್ರೀಗಳು
ಈಗಾಗಲೇ ಹಲವಾರು ಬಾರಿ ಡಿಕೆಶಿ ಮುಖ್ಯಮಂತ್ರಿ ವಿಚಾರ ಪ್ರಸ್ತಾಪಿಸಿರುವ ನೊಣವಿನಕೆರೆ ಶ್ರೀ, ಇದೀಗ ಲಕ್ಷ್ಮೇಶ್ವರದ ಮುಕ್ತಿಮಂದಿರದಲ್ಲಿ ಮತ್ತೊಮ್ಮೆ ಹೇಳಿಕೆ ನೀಡಿರುವುದು ಸಂಚಲನ ಮೂಡಿಸಿದ್ದಾರೆ.