ದಾವಣಗೆರೆ: ಗಂಡನ ಮನೆ ಬಿಟ್ಟು ತವರು ಮನೆ ಸೇರಿದ್ದ ಮಹಿಳೆ, ಸರ್ಕಾರದ ಗೃಹಲಕ್ಷ್ಮೀ ಹಣ ಬಿಡಿಸಲು ಬ್ಯಾಂಕ್ಗೆ ಬಂದಿದ್ದಾಳೆ. ಈ ವೇಳೆ ಪತ್ನಿಯನ್ನು ನೋಡಿದ ಪತಿ, ಆಕೆಯನ್ನು ಮನವೊಲಿಸಿ ಜಮೀನಿಗೆ ಕರೆದೊಯ್ದು ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಉಜ್ಜಪ್ಪರ ಒಡೆರಹಳ್ಳಿ ಗ್ರಾಮದಲ್ಲಿ ನಡೆದಿದೆ ಸತ್ಯಮ್ಮ ಕೊಲೆಯಾದ ಮಹಿಳೆ. ಪತ್ನಿ ಮೇಲೆ ಹಲ್ಲೆ ನಡೆಸಿ ಉಸಿರುಗಟ್ಟಿಸಿ ಪತಿ ಅಣ್ಣಪ್ಪ ಕೊಲೆ ಮಾಡಿ ಪರಾರಿಯಾಗಿದ್ದಾನೆ. ದಂಪತಿ 12 ವರ್ಷದ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು.
ದಂಪತಿಗೆ ಒಂದು ಹೆಣ್ಣು, ಒಂದು ಗಂಡು ಇದೆ. ಪತಿ ಅಣ್ಣಪ್ಪ ನಿತ್ಯ ಕುಡಿದು ಬಂದು ಪತ್ನಿ ಸತ್ಯಮ್ಮರಿಗೆ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದನು. ಇದರಿಂದ ನಿತ್ಯ ಜಗಳ ನಡೆಯುತ್ತಿತ್ತು. ಸತ್ಯಮ್ಮ ತವರು ಮನೆ ಸೇರಿದ್ದರು.
ಗೃಹಲಕ್ಷ್ಮೀ ಯೋಜನೆ ಹಣ ಬಿಡಿಸಲು ಜಗಳೂರು ತಾಲೂಕಿನ ಅಸಗೋಡು ಬ್ಯಾಂಕ್ಗೆ ಬಂದಿದ್ದರು. ಇದೇ ವೇಳೆ ಬ್ಯಾಂಕ್ಗೆ ಬಂದ ಪತಿ ಅಣ್ಣಪ್ಪ ಪತ್ನಿ ಸತ್ಯಮ್ಮಳನ್ನ ಮನವೊಲಿಸಿ ಜಮೀನಿಗೆ ಕರೆದೊಯ್ದು ಹಲ್ಲೆ ಮಾಡಿದ್ದಾನೆ. ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.