ಬೆಂಗಳೂರು; ಹಿಂಗಾರು ಮಳೆಯ ಅಬ್ಬರ ನಂತರ 15 ದಿನ ಬಿಡುವಿನ ಬಳಿಕ ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನವೆಂಬರ್ 9 ರಿಂದ ಮೂರು ದಿನ ದಾವಣಗೆರೆ ಸಹಿತ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆಯ ಬಹುತೇಕ ಕಡೆ ಭತ್ತ ಕೊಯ್ಲಿಗೆ ಬಂದಿದ್ದು, ರೈತರಲ್ಲಿ ಆತಂಕ ಹೆಚ್ಚಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
- ನ.9ರಿಂದ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ
- 15ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ
- ಅಕಾಲಿಕ ಮಳೆಯಿಂದ ಭತ್ತ ಬೆಳೆಗಾರರಲ್ಲಿ ಆತಂಕ
ರಾಜ್ಯದಲ್ಲಿ ಈಗಾಗಲೇ ಚಳಿ ಶುರುವಾಗಿದ್ದು, ರಾತ್ರಿ ಮತ್ತು ಮುಂಜಾನೆ ಮಂಜು ಬೀಳಲಿದೆ. ಕಳೆದ 15. ದಿನದ ಹಿಂದೆ ಸುರಿದ ಅಕಾಲಿಕ ಮಳೆಯಿಂದ ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಗೆ ಹಾನಿಯಾಗಿತ್ತು. ಈಗ ಜಿಲ್ಲೆಯಲ್ಲಿ ಬಹುತೇಕ ಭತ್ತ ಕೊಯ್ಲಿಗೆ ಬಂದಿದ್ದು, ಅಕಾಲಿಕ ಮಳೆ ಮುನ್ಸೂಚನೆ ರೈತರಲ್ಲಿ ಆತಂಕ ಸೃಷ್ಟಿಸಿದೆ.



