ದಾವಣಗೆರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ನವೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಹರಿಹರ ತಾಲ್ಲೂಕಿನ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಮತ್ತು ಗೈಡ್ಸ್, ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಕೇಂದ್ರದ ಮಾಜಿ ಸಚಿವ ಕೊಂಡಜ್ಜಿ ಬಸಪ್ಪನವರ 42ನೇ ಪುಣ್ಯಸ್ಮರಣೆ ಹಾಗೂ ದಿ.ಶಾಮನೂರು ಕಲ್ಲಪ್ಪ ಸಾವಿತ್ರಮ್ಮ ಆಡಳಿತ ಕಚೇರಿಯ ನೂತನ ಕಟ್ಟಡ, ದಿ.ಎಂ.ಕೆ ಪಾಣಿ ಅತಿಥಿಗೃಹ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಹಾಗೂ ಮಾಜಿ ಸಚಿವ ಪಿ.ಜಿ.ಆರ್ ಸಿಂಧ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಹರಿಹರ ಶಾಸಕ ಬಿ.ಪಿ.ಹರೀಶ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್, ಶಾಲಾ ಶಿಕ್ಷಣ ಮತ್ತು ಸಾಕ್ಷರಾತಾ ಇಲಾಖೆಯ ಉಪನಿರ್ದೇಶಕರಾದ ಜಿ.ಕೊಟ್ರೇಶ್, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ದಪ್ಪ.ಎಸ್.ಜಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಉಪಾಧ್ಯಕ್ಷರಾದ ಕೊಂಡಜ್ಜಿ.ಬ.ಷಣ್ಮುಖಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಕುಮಾರ್ ಕೊಂಡಜ್ಜಿ, ಕೊಂಡಜ್ಜಿಯ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಕರಿಯಮ್ಮ, ಕೊಂಡಜ್ಜಿ ಬಸಪ್ಪ ಸ್ಕೌಟ್ಸ್-ಗೈಡ್ಸ್ ತರಬೇತಿ ಕೇಂದ್ರ ಅಭಿವೃದ್ದಿ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯ ಹಣಕಾಸು ಸಮಿತಿ ಸದಸ್ಯರು ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಖಜಾಂಚಿ ಡಾ.ಕೆ.ಬಿ ಗುರುಮೂರ್ತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಮುರುಘರಾಜೇಂದ್ರ.ಜೆ.ಚಿಗಟೇರಿ ಭಾಗವಹಿಸುವರು.



