ದಾವಣಗೆರೆ; ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಕಚೇರಿ ಮತ್ತು ಮನೆ ಮೇಲೆ ಇಂದು (ನ.12) ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದ ತಂಡ ದಾಳಿ ನಡೆಸಿದೆ. ದಾವಣಗೆರೆಯ ಶಕ್ತಿನಗರದ ಮೂರನೇ ಕ್ರಾಸ್ ನಲ್ಲಿರುವ ಕಮಲ್ ರಾಜ್ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಬಗ್ಗೆ ಸಾರ್ವಜನಿಕರಿಂದ ದೂರಿಗೆ ಬಂದ ಹಿನ್ನೆಲೆ ಕಮಲ್ ರಾಜ್ ನಿವಾಸದಲ್ಲಿ ನಡೆಸಲಾಗಿದೆ. ನಿವಾಸದಲ್ಲಿ ದಾಖಲೆ ಹಾಗೂ ನಗದು ಪರಿಶೀಲಿಸಿ, ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.