ದಾವಣಗೆರೆ: ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೃಷಿಕ ಸಮಾಜದ ಚುನಾವಣೆ ಡಿಸೆಂಬರ್ 15ರಂದು ಬೆಳಿಗ್ಗೆ 8ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಆಯಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ.
ದಾವಣಗೆರೆ, ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ ಹಾಗೂ ರೈತ ಸಂಪರ್ಕ ಕೇಂದ್ರ ನ್ಯಾಮತಿ ಈ ಸ್ಥಳಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜ್ಯ ಕೃಷಿಕ ಸಮಾಜದ ಜಂಟಿ ನಿರ್ದೇಶಕರು ಹಾಗೂ ಪದನಿಮಿತ್ತ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.



