Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ; 51 ಸಾವಿರ ಗಡಿದಾಟಿದ ಬೆಲೆ- ಡಿ.09ರ ರೇಟ್ ಎಷ್ಟು ..?

ದಾವಣಗೆರೆ

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ; 51 ಸಾವಿರ ಗಡಿದಾಟಿದ ಬೆಲೆ- ಡಿ.09ರ ರೇಟ್ ಎಷ್ಟು ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರಲ್ಲಿ (arecanut rate) ಕಳೆದ 20 ದಿನದಿಂದ ಸತತ ಚೇತರಿಕೆ ಕಾಣುತ್ತಿದೆ. ಇಂದು (ಡಿ.6) ಸಹ 400ರೂ‌.ಗಳಷ್ಟು ಏರಿಕೆ ಕಂಡಿದೆ. ಈ ಮೂಲಕ ಅಡಿಕೆ ದರ 51 ಸಾವಿರ ಗಡಿದಾಟಿದೆ. ಇದರಿಂದ ಅಡಿಕೆ ಬೆಳೆಗಾರರಲ್ಲಿ ಖುಷಿ ನೀಡಿದೆ.

  • ಡಿ.9ರ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)
  • ಗರಿಷ್ಠ ಬೆಲೆ 51,389
  • ಕನಿಷ್ಠ ಬೆಲೆ 44,799
  • ಸರಾಸರಿ ಬೆಲೆ 49,597

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಕೆ ಮುಖ್ಯ ಬೆಳೆಯಾಗಿದೆ. ಪ್ರತಿ ವರ್ಷಕ್ಕೆ ಹೋಲಿಸಿದ್ರೆ ಈ ವರ್ಷ ಸ್ವಲ್ಪ ಇಳುವರಿ ಕಡಿಮೆ. ಏಕೆಂದ್ರೆ ಕಳೆದ ವರ್ಷದ ತೀವ್ರ ಮಳೆ ಕೊರತೆಯಿಂದ ಉಷ್ಣಾಂಶ ಏರಿಕೆಯಾಗಿ ಇಳುವರಿ ಕುಸಿತ ಕಂಡಿದೆ. ಇಂದು (ಡಿ.09) ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 51,389 ರೂ. ಇದ್ದು, ಕನಿಷ್ಠ ಬೆಲೆ 44,799 ರೂ., ಸರಾಸರಿ ಬೆಲೆ 49,597. ರೂ.‌ಇದೆ. ಬೆಟ್ಟೆ ಅಡಿಕೆ ಗರಿಷ್ಠ 31,787 ರೂ. ದಾಖಲಾಗಿದೆ.

ಜೂನ್ ಮೊದಲ ವಾರ 54 ಸಾವಿರ ಗಡಿ ದಾಟಿದ್ದ ಬೆಲೆ, ಜೂ.20ರಿಂದ ದಿನದಿಂದ ದಿನಕ್ಕೆ ಕುಸಿಯುತ್ತ ಬಂದಿದ್ದು, ಸೆಪ್ಟೆಂಬರ್ ನಲ್ಲಿ ಹೊಸ ಅಡಿಕೆ 46 ಸಾವಿರ ಗಡಿ ತಲುಪಿತ್ತು. ಅಕ್ಟೋಬರ್ ಪ್ರಾರಂಭದಲ್ಲಿ ಚೇತರಿಕೆ ಕಂಡು 50 ಸಾವಿರ ಗಡಿ ಸಮೀಪ ಬಂದಿತ್ತು. ನವೆಂಬರ್‌ ಮೊದಲ ವಾರ ಕುಸಿದು ಕೊನೆಯಲ್ಲಿ 50 ಸಾವಿರ ಗಡಿ ತಲುಪಿತ್ತು. ಈಗ ಡಿಸೆಂಬರ್ ನಲ್ಲಿ 51 ಸಾವಿರ ಗಡಿದಾಟಿದೆ. ಕಳೆದ ವರ್ಷ (2023) ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಈ ವರ್ಷ ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿ ನಂತರ ಕುಸಿದಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top