Connect with us

Dvgsuddi Kannada | online news portal | Kannada news online

ವಾಯುಭಾರ ಕುಸಿತ: ಮೋಡಕವಿದ ವಾತಾವರಣ; ವಿವಿಧ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ-ಎಲ್ಲೆಲ್ಲಿ ಮಳೆ..?

ಪ್ರಮುಖ ಸುದ್ದಿ

ವಾಯುಭಾರ ಕುಸಿತ: ಮೋಡಕವಿದ ವಾತಾವರಣ; ವಿವಿಧ ಜಿಲ್ಲೆಯಲ್ಲಿ ಮಳೆ ಮುನ್ಸೂಚನೆ-ಎಲ್ಲೆಲ್ಲಿ ಮಳೆ..?

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಡಿ.18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳ್ಳಂಬೆಳಗ್ಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿದ್ದು, ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುತ್ತಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇನ್ನೂ ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಡಿ.12 ರಂದು ಶಿವಮೊಗ್ಗ, ಉಡು‍ಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಡಿ. 13 ರಂದು ಶಿವಮೊಗ್ಗ, ಉಡು‍ಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.‌ ಡಿ.18ರ ವರೆಗೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top