ದಾವಣಗೆರೆ: ಜಿಲ್ಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ NDPS act ಪ್ರಕರಣಗಳಲ್ಲಿ ವಶಪಡಿಸಿಕೊಂಡ ಸುಮಾರು 22 ಕೆಜಿಗೂ ಅಧಿಕ ಗಾಂಜಾ, ಮಾದಕ ವಸ್ತುಗಳನ್ನು ನ್ಯಾಯಾಲಯ ಅನುಮತಿ ಮೇರೆಗೆ ದಾವಣಗೆರೆ ಹೊರ ವಲಯದ ಅವರಗೊಳ್ಳದಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಎಸ್ಪಿ ಉಮಾ ಪ್ರಶಾಂತ ಉಪಸ್ಥಿತಿಯಲ್ಲಿ ನಾಶಪಡಿಸಲಾಯಿತು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಎಂ ಸಂತೋಷ, ಜಿ ಮಂಜುನಾಥ, ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ, ಪಿ.ಬಿ ಪ್ರಕಾಶ್, ಪಿಎಸ್ ಐ ರೂಪ ತೆಂಬದ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದಡಿಯಲ್ಲಿ ಮಾದಕ ವಸ್ತುಗಳ ಬಳಕೆಯಿಂದಾಗುವ ದುಷ್ಪರಿಣಾಮಗಳು ಹಾಗೂ ಅಕ್ರಮ ಸಾಗಟಕ್ಕೆ ಇರುವ ಕಾನೂನು ಕ್ರಮಗಳ ಬಗ್ಗೆ ಈಗಾಗಲೇ ಶಾಲಾ ಕಾಲೇಜುಗಳು ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ದಾಸರಾಗಬಾರದು, ಮಾದಕವಸ್ತುಗಳ ಬಳಕೆ ಹಾಗೂ ಮಾರಾಟ ಮಾಡುತ್ತಿರುವ ಬಗ್ಗೆ ಕಂಡುಬಂದರೆ ಕೂಡಲೇ ಪೊಲೀಸರ ಗಮನಕ್ಕೆ ತರುವುದು, ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಣ, ಮಾದಕ ವ್ಯಸನ ಮುಕ್ತ ಕರ್ನಾಟಕ, ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸುವ ಕಾರ್ಯದಲ್ಲಿ ಸಾರ್ವಜನಿಕರು ಕೈಜೋಡಿಸಬೇಕು.
Drug-free Karnataka’ app ಅನ್ನು ಜಾರಿಗೆ ತಂದಿದ್ದು ಸಾರ್ವಜನಿಕರು ಈ ಆಫ್ ಅನ್ನು ಮೊಬೈಲ್ ಇನಸ್ಟಾಲ್ ಮಾಡಿಕೊಂಡು ತಮ್ಮ ಸುತ್ತ ಮುತ್ತ ಹಾಗೂ ಇತರೆಡೆ ಮಾದಕವಸ್ತುಗಳ ಬಳಕೆ ಹಾಗೂ ಮಾರಾಟ ಮಾಡುತ್ತಿರುವ ಬಗ್ಗೆ ಕಂಡುಬಂದರೆ ಕೂಡಲೇ app ಮೂಲಕ ಮಾಹಿತಿ ನೀಡಬಹುದು ಎಂದು ಪೊಲೀಸ್ ಅಧೀಕ್ಷಕರಾದ ಉಮಾಪ್ರಶಾಂತ್ ತಿಳಿಸಿದರು.



