ಪುತ್ತೂರು: ಮನೆ ಮನೆಗೆ ತೆರಳಿ ಬಿಪಿ, ಶುಗರ್ ಹಾಗೂ ಮಾನೋವ್ಯಾಧಿಗಳ ಬಗ್ಗೆ ತಪಾಸಣೆ ನಡೆಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹ ಆರೋಗ್ಯ ಯೋಜನೆ’ಯನ್ನು ಕೋಲಾರದಲ್ಲಿ ಪ್ರಯೋಗಿಕವಾಗಿ ಯಶಸ್ವಿಯಾಗಿದೆ. ಮುಂದಿನ ಫೆಬ್ರವರಿ ತಿಂಗಳಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಪುತ್ತೂರು ಸರ್ಕಾರಿ ಆಸ್ಪತ್ರೆಯ ಬಿ.ಪಿ.ಎಚ್ ಲ್ಯಾಬ್ ಕಟ್ಟಡ ಹಾಗೂ ಇತರ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ರಕ್ತದೊತ್ತಡ, ಮಧು ಮೇಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕ್ರಮೇಣ ಇದು ಬೇರೆ ಕಾಯಿಲೆಗಳಿಗೂ ದಾರಿ ಮಾಡುತ್ತದೆ. ಗೃಹ ಆರೋಗ್ಯ ಯೋಜನೆ ಯಡಿ ಕೋಲಾರದಲ್ಲಿ ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಇದರಿಂದ ಸಮಸ್ಯೆಗಳನ್ನು ಆರಂಭದಲ್ಲೇ ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.



