ದಾವಣಗೆರೆ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಆಗ್ರಹಿಸಿ ಸಿಎಂ, ಡಿಸಿಎಂಗೆ ಪತ್ರ ಬರೆದ ವಿಷ ಕೇಳುತ್ತಿದ್ದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಕಿಡಿಕಾರಿದರು. ಅವನು ಒಬ್ಬ ಮೆಂಟಲ್ ಬಾರೋ ಮಾರಾಯ. ಅವನ ಬಗ್ಗೆ ಏನ್ ಕೇಳ್ತಿರಾ..!! ಎಂದು ಅಕ್ರೋಶ ವ್ಯಕ್ತಪಡಿಸಿದರು.
ನಗರದ ಹೊರ ವಲಯದ ಬಸಾಪುರ ಗ್ರಾಮದಲ್ಲಿ ಮಹೇಶ್ವರ ಜಾತ್ರೆಗೆ ಪಾಲ್ಲೊಂಡು ವೇಳೆ ಸುದ್ದಿಗಾರಿಗೆ ಪ್ರಶ್ನೆಗೆ ಉತ್ತರಿಸಿದರು. ಅವನ (ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್) ಬಗ್ಗೆ ನಾನ್ ಏನು ಹೇಳಲಿ. ಅವನು, ಮೊದಲು ಅವರ ಅಣ್ಣಂಗೆ ಮರ್ಯಾದೆ ಕೊಟ್ಟು ನೆಟ್ಟಗೆ ನೋಡಿಕೊಳ್ಳಲಿ ಎಂದು ಕಿಡಿಕಾರಿದರು.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಏನು ಕೆಲಸ ಮಾಡಿದ್ದಾನೆ ಎಂಬುದು ಎಲ್ಲರಿಗೂ ಗೊತ್ತಿದೆ. ಅವನು ಬೆಳೆದಿದ್ದೇ ಅವನ ಅಣ್ಣನಿಂದ. ಮೊದಲು ಅದನ್ನು ತಿಳಿದುಕೊಂಡು ಮಾತನಾಡಲಿ. ಅನು ಏನು ಮಾಡಿದ್ದಾನೆ ಎಂಬುದು ಎಲ್ಲರಿಗೂ ಗೊತ್ತು. ಇಂಥವನ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಾ ಆಕ್ರೋಶ ವ್ಯಕ್ತಪಡಿಸಿದರು.



