ದಾವಣಗೆರೆ: ಹೊಸ ವರ್ಷಾಚರಣೆಗೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್; ಸಿಸಿಟಿವಿ ಅಳವಡಿಕೆ, ಸಮಯ ನಿಗದಿ ಕಡ್ಡಾಯ; ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಎಚ್ಚರಿಕೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ಹೊಸ ವರ್ಷಾಚರಣೆಗೆ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್; ಸಿಸಿಟಿವಿ ಅಳವಡಿಕೆ, ಸಮಯ ನಿಗದಿ ಕಡ್ಡಾಯ; ನಿಯಮ ಉಲ್ಲಂಘಿಸಿದ್ರೆ ಕಾನೂನು ಕ್ರಮ ಎಚ್ಚರಿಕೆ..!ದಾವಣಗೆರೆ: ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ
ಕಾನೂನು & ಸುವ್ಯವಸ್ಥೆ ಕಾಪಾಡುವ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿರುತ್ತದೆ.

ದಿನಾಂಕ: 31-12-2024 ರಂದು ರಾತ್ರಿ 2025 ನೇ ಸಾಲಿನ ಈ ಹೊಸ ವರ್ಷ ಆಚರಣೆ ಸಂಧರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಹೊಸ ವರ್ಷಾಚರಣೆ ಆಯೋಜಿಸಲಾಗುವ ಕಾರ್ಯಕ್ರಮಗಳಲ್ಲಿ ಆಯೋಜಕರು, ಸಂಘಟನೆಗಳು ಮತ್ತು ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. 

ಪೊಲೀಸ್ ಇಲಾಖೆಯಿಂದ ಕೈಗೊಂಡಿರುವ ಕ್ರಮಗಳು

  • 01) ನಗರದ ವಿವಿಧ ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದಿದ್ದು, ಕುಡಿದು ವಾಹನಗಳನ್ನು ಚಾಲನೆ ಮಾಡುವವರ,ತ್ರಿಬಲ್ ರೈಡಿಂಗ್ ಹಾಗೂ ವೀಲಿಂಗ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು
  • 02) ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ತಾಲ್ಲೂಕು ಕೇಂದ್ರಗಳಾದ ಹರಿಹರ, ಹೊನ್ನಾಳಿ, ಚನ್ನಗಿರಿ, ಜಗಳೂರು,ನ್ಯಾಮತಿ ಪಟ್ಟಣಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿರುತ್ತದೆ
  • 03) ದಾವಣಗೆರೆ ಜಿಲ್ಲೆಯಾದ್ಯಂತ ಹೊಸ ವರ್ಷಾಚರಣೆ ಸಂಬಂಧ ಅಗತ್ಯ ಪೊಲೀಸ್ ಅಧಿಕಾರಿ -ಸಿಬ್ಬಂದಿಗಳನ್ನು
    ನಿಯೋಜಿಸಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಕೆಎಸ್‌ಆರ್‌ಪಿ ಮತ್ತು ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ
  • 04) ಜಿಲ್ಲೆಯಲ್ಲಿ ಬಾರ್ & ರೆಸ್ಟೋರೆಂಟ್, ವೈನ್ ಶಾಪ್‌ಗಳು ನಿಗಧಿಪಡಿಸಿದ ಸಮಯಕ್ಕೆ ಬಂದ್ ಮಾಡಲು ಸೂಚಿಸಲಾಗಿದೆ.
  • 05) ನಗರದ ಹೊರ ವಲಯಗಳಾದ ಕೊಂಡಜ್ಜಿ ಕೆರೆ, ದೇವರಬೆಳಕೆರೆ ಚೆಕ್ ಡ್ಯಾಂ ಮತ್ತು ಇತರೆ ಹೊರ ಬಾಗಗಳಲ್ಲೂ
    ಪೊಲೀಸ್ ನಿಯೋಜನೆ ಮಾಡಲಾಗಿದೆ.
  • 06) ಹೊಸ ವರ್ಷಾಚರಣೆ ಆಚರಣೆ ಕಾರ್ಯಕ್ರಮಗಳ ಆಯೋಜಕರುಗಳಿಗೆ ಈಗಾಲೇ ಯಾವುದೇ ಅವಘಡಗಳಿಗೆ
    ಅವಕಾಶವಿರದಂತೆ ಸೂಕ್ತ ಪೂರ್ವ ಸಿದ್ಧತೆಗಳನ್ನು & ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆಗಳನ್ನುನೀಡಲಾಗಿರುತ್ತದೆ
  • 07) ದಾವಣಗೆರೆ ನಗರದಲ್ಲಿ ಅಗತ್ಯವಿದ್ದ ಸೂಕ್ಷ್ಮ ಪ್ರದೇಶ ಕಡೆಗಳಲ್ಲಿ ಡೋನ್ ನಿಗಾವಹಿಸಲಾಗುವುದು.

ಹೊಸ ವರ್ಷಾಚರಣೆಯಲ್ಲಿ ಪಾಲಿಸಬೇಕಾದ ಸೂಚನೆಗಳು

  • ಕಾರ್ಯಕ್ರಮದ ಆಯೋಜಕರು ಹಾಗೂ ಸಾರ್ವಜನಿಕರು ನಿಗದಿತ ಸಮಯಕ್ಕೆ ಮುಕ್ತಾಯ
    ಮಾಡುವುದು.
  • ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿ, ಕುಡಿದು ವಾಹನ ಚಾಲನೆ
    ಮಾಡುವುದು, ವಾಹನಗಳಲ್ಲಿ ಹೆಚ್ಚಿನ ಜನರು ಸವಾರಿ ಮಾಡಬಾರದು, ವೀಲಿಂಗ್ ಮಾಡುವುದು ಮಾಡಬಾರದು
  • ಅಕ್ಕಪಕ್ಕದ ಜನರಿಗೆ ತೊಂದರೆ ಆಗದಂತೆ ವಿಶೇಷವಾಗಿ ಆಸ್ಪತ್ರೆಗಳು,
    ಅಪಾರ್ಟ್‌ಮೆಂಟ್‌ಗಳ ಸುತ್ತಮುತ್ತ ಮತ್ತು ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ/ಹೆಣ್ಣು ಮಕ್ಕಳಿಗೆ, ವಿದ್ಯಾರ್ಥಿಗಳಿಗೆ
    ತೊಂದರೆಯಾಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು
  • ಯುವಕರು ಅಶ್ಲೀಲವಾಗಿ, ಅಸಭ್ಯವಾಗಿ ವರ್ತನೆ ಮಾಡಿದರೆ ಹಾಗೂ ವಿಶೇಷವಾಗಿ ಹೆಣ್ಣು
    ಮಕ್ಕಳಿಗೆ ಚುಡಾಯಿಸುವುದು, ದಾಂದಲೇ ನಡೆಸುವುದು, ಮಹಿಳೆಯರಿಗೆ ತೊಂದರೆ ಉಂಟುಮಾಡುವುದು ಕಂಡು ಬಂದರೆ
    ಅಂತವರ ಕಂಡು ಬಂದರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು
  • ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥವಾ ಮಧ್ಯ ನಶೆಯಲ್ಲಿ ಆಚರಣೆ ಮಾಡಿ ಸಾರ್ವಜನಿಕರಿಗೆ ಶಾಂತಿಗೆ
    ತೊಂದರೆ ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು
  • ಹೊಸ ವರ್ಷಾಚರಣೆ ಆಚರಣೆ ಕಾರ್ಯಕ್ರಮಗಳ ಆಯೋಜಕರುಗಳು ಕಡ್ಡಾಯವಾಗಿ ಸಿಸಿಟಿವಿಗಳನ್ನು ಅಳವಡಿಸಬೇಕು
    ಸಾರ್ವಜನಿಕರು ಮುಖ್ಯವಾಗಿ ಯುವಕರು ಬೇರೆಯವರಿಗೆ ತೊಂದರೆಯಾಗದ ರೀತಿಯಲ್ಲಿ ಹೊಸ ವರ್ಷಾಚರಣೆ
    ಮಾಡಲು ಸೂಚಿಸಿದೆ.
  • ವಾಹನಗಳನ್ನು ಅತೀ ವೇಗವಾಗಿ ಚಾಲನೆ ಮಾಡುತ್ತಾ, ಸಾರ್ವಜನಿಕರಿಗೆ ತೊಂದರೆಯಾಗುವಂತೆ ಜೋರಾಗಿ
    ಕೂಗುವುದು, ಕಿರಿಚುವುದನ್ನು ನಿಷೇಧಿಸಿಲಾಗಿದ್ದು, ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
  • ಸಾರ್ವಜನಿಕ/ಜನ ಸಂದಣಿ ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಬಾರದು ಹಾಗೂ ಯಾವುದೇ ಅಗ್ನಿಅವಘಡಗಳು
    ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು.
  • ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂಧರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಆಚರಿಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ
    ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿಸಿಬ್ಬಂದಿಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.
  • ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳು ಸುದ್ದಿ ಹರಡುವುದು, ಕಾನೂನು
    ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್‌ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ
    ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು
  • ಕರ್ಕಶವಾದ ಶಬ್ದವನ್ನುಂಟು ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆಗಳನ್ನು ಉಪಯೋಗಿಸಬಾರದು, ಲೌಡ್ ಸ್ಪೀಕರ್ ಗಳನ್ನು ಸರ್ವೋಚ್ಚ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಉಲ್ಲಂಘನೆ ಆಗದಂತೆ ಮತ್ತು ಶಬ್ದ ಮಾಲಿನ್ಯ ಆಗದಂತೆ ಧ್ವನಿವರ್ಧಕಗಳನ್ನು ಬಳಸುವುದು. ಉಲ್ಲಂಘಿಸಿದ್ದಲ್ಲಿ ಕಾನೂನು
    ರಿತ್ಯಾ ಕ್ರಮ ಕೈಗೊಳ್ಳಲಾಗುವುದು.
  • ನೈತಿಕ ಪೊಲೀಸ್ ಗಿರಿ ಮತ್ತು ಅನುಚಿತ ವರ್ತನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು
  • ಹೊಸ ವರ್ಷದ ಆಚರಣೆ ನಡೆಸುವ ಆಯೋಜಕರು ವಾಹನಗಳ ಪಾರ್ಕಿಂಗ್ ಗೆ ಪ್ರತ್ಯೇಕ ವ್ಯವಸ್ಥೆಮಾಡಿಕೊಳ್ಳುವುದು
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *