ದಾವಣಗೆರೆ: ದಾವಣಗೆರೆ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟರುಗಳಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಜನವರಿ 20 ರಂದು ಬೆಳಿಗ್ಗೆ 11 ಗಂಟೆಗೆ ತಮ್ಮ ಸಂಪೂರ್ಣ ವಿವರ ಹಾಗೂ ದಾಖಲೆಗಳೊಂದಿಗೆ ಅಂಚೆ ಅಧೀಕ್ಷಕರು ದಾವಣಗೆರೆ ಅಂಚೆ ವಿಭಾಗ ದಾವಣಗೆರೆ-01 ಇಲ್ಲಿ ನೇರ ಸಂದರ್ಶನಕ್ಕೆ ಹಾಜರಗಬೇಕೆಂದು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ



