ಬೆಂಗಳೂರು: ರಾಜ್ಯದ ವಿವಿಧ ಕಾಲೇಜುಗಳಲ್ಲಿ 1,033 ಹುದ್ದೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಕೂಡಲೇ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ಈ ಖಾಲಿ ಹುದ್ದೆ ಭರ್ತಿಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಎರಡು ದಿನಗಳಲ್ಲಿ ಮಾಹಿತಿ ನೀಡಿಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‌ನಲ್ಲಿ 250 ಕೋಟಿ ನೀಡಲಾಗಿದೆ. ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ಕನ್ನಡ ವಿಶ್ವವಿದ್ಯಾಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳ ಸಮಸ್ಯೆಗಳನ್ನು ಪರಿಶೀಲಿಸಿ, ಪರಿಹಾರ ಒದಗಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.