ದಾವಣಗೆರೆ: ದಾವಣಗೆರೆ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಮೇಯರ್ ಎಸ್. ಟಿ. ವೀರೇಶ್ ಹಾಗೂ ಉಪಾಧ್ಯಕ್ಷರಾಗಿ ರುದ್ರೇಗೌಡರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಒಕ್ಕೂಟದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎಲ್ಲರೂ ಚುನಾವಣೆ ಇಲ್ಲದೆ ಅವಿರೋಧವಾಗಿ ಆಯ್ಕೆ ಮಾಡಲು ಎಲ್ಲಾ ಸದಸ್ಯರು ನಿರ್ಧರಿಸಿದರು. ಈ ಹಿನ್ನೆಲೆಯಲ್ಲಿ ಎಸ್. ಟಿ. ವೀರೇಶ್ ಅಧ್ಯಕ್ಷರಾಗಿ ಹಾಗೂ ರುದ್ರೇಗೌಡ ಅವರನ್ನು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.