ದಾವಣಗೆರೆ: ಪ್ರಸಕ್ತ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಜಿಮ್ ಫಿಟ್ನೇಸ್ ಹಾಗೂ ನಿರೂಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಈ ತರಬೇತಿಯು ಬೆಂಗಳೂರಿನಲ್ಲಿ ನಡೆಸಲಾಗುವುದು. ಆಸಕ್ತರು ಜನವರಿ 25 ರೊಳಗಾಗಿ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08192-237480 ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.



