ಡಿವಿಜಿ ಸುದ್ದಿ, ಹೊಳಲ್ಕೆರೆ: ಚಿತ್ರದುರ್ಗ ಜಿಲ್ಲಾಧಿಕಾರಿ ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್ ಆರ ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ಹೊಳಲ್ಕೆರೆ ಗ್ರಾಮದ ಶಿವಗಂಗಾ ಗ್ರಾಮದಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಚಲಿಸುತ್ತಿದ್ದ ಕಾರಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಡಿಸಿ ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಡಿಸಿ ಅವರನ್ನುಕೂಡಲೇ ಬೇರೆ ಕಾರಿನಲ್ಲಿತೆರಳಿದ್ದಾರೆ. ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರ ಎಡಗೈ ಬೆರಳಿಗೆ ಪುಟ್ಟ ಗಾಯವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ಚಿತ್ರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




