ದಾವಣಗೆರೆ: ಪ್ರತಿಯೊಬ್ಬರೂ ಸಂಚಾರಿ ನಿಯಮಗಳ (traffic rules) ಅರಿವು, ಪಾಲನೆ ಕಡ್ಡಾಯವಾಗಿದೆ. ಇದರಿಂದ ರಸ್ತೆ ಅಪಘಾತಗಳನ್ನು(accident) ತಪ್ಪಿಸಲು ಸಾಧ್ಯ ಎಂದು ಡಾ.ಪ್ರಭಾ ಮಲ್ಲಿಕಾರ್ಜುನ್ ಸಲಹೆ ನೀಡಿದರು.
ರೇಣುಕಾ ಮಂದಿರದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಸಪ್ತಾಹದ (Road safety) ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.ದಾವಣಗೆರೆ ಜಿಲ್ಲೆಯ ಪೊಲೀಸ್ ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ವಾಹನ ಸವಾರರಿಗೆ ಸತತ ಒಂದು ತಿಂಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಚಾರ ನಿಯಮಗಳ ಪಾಲನೆ ಬಗ್ಗೆ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿರುವುದು ಶ್ಲಾಘನೀಯ ಎಂದರು.
ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತದಲ್ಲಿ ಗಾಯಗೊಂಡವರಿಗೆ ಸಕಾಲಕ್ಕೆ ಚಿಕಿತ್ಸೆ ಸಿಗಬೇಕು. ಟ್ರಾಮಾ ಕೇರ್ ಸೆಂಟರ್ (Trauma Care Center) ಹಾಗೂ ಆಂಬುಲೆನ್ಸ್ (Ambulance) ಅಗತ್ಯವಿದ್ದು, ನುರಿತ ವೈದ್ಯರ ಸೇವೆ ದೊರಕುವಂತಹ ವ್ಯವಸ್ಥೆ ರೂಪುಗೊಳ್ಳಬೇಕು. ಅಪಘಾತ ಸಂಭವಿಸಿದ ತಕ್ಷಣ ಚಿಕಿತ್ಸೆ ಲಭಿಸಿದರೆ ಗಾಯಾಳುಗಳನ್ನು ಪ್ರಾಣಾಪಯದಿಂದ ಪಾರು ಮಾಡಲು ಸಾಧ್ಯವಿದೆ. ತುರ್ತು ಚಿಕಿತ್ಸೆಗೆ (Emergency treatment) ಸುಸಜ್ಜಿತ ಆಂಬುಲೆನ್ಸ್, ವೈದ್ಯಕೀಯ ಸಿಬ್ಬಂದಿ ಸೇರಿ ಇತರ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕಿದೆ ಎಂದರು.
ಡ್ರಿಂಕ್ ಅಂಡ್ ಡ್ರೈವ್ ಹಾಗೂ ವೀಲಿಂಗ್‌ನಿಂದ ಹಲವು ಅಪಘಾತಗಳು ಸಂಭವಿಸುತ್ತಿವೆ. ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಮಹಿಳೆಯರ ಸೀರೆ, ದುಪ್ಪಟದ ಬಗ್ಗೆಯೂ ಜಾಗೃತಿ ಮೂಡಿಸಬೇಕು’ ಎಂದರು.
ಪೊಲೀಸ್ ಅಧೀಕ್ಷಕರು ಮಾತನಾಡಿ, ಸರ್ವಜನಿಕರು ಎಲ್ಲರೂ, ವಾಹನ ಸವಾರರೇಲ್ಲರೂ ಕಡ್ಡಾಯವಾಗಿ ಸಂಚಾರ ನಿಯಮಗಳು/ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ. ಆದ್ದರಿಂದ ನಿಮಗಾಗಿ , ನಿಮ್ಮ ಸುರಕ್ಷತೆಗಾಗಿ ಸಂಚಾರ ಸುರಕ್ಷತಾ ನಿಯಮಗಳನ್ನು ಪಾಲಿಸಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಮಂಜುನಾಥ್ , ಲಾರಿ ಮಾಲೀಕ ಸಂಘದ ಅಧ್ಯಕ್ಷ ಸೈಯದ್ ಸೈಫುಲ್ಲ, ಪಿಎಸ್ ಐ ಶೈಲಜಾ, ನಿರ್ಮಲ, ಜಯಶೀಲ, ಮಂಜಪ್ಪ ಹಾಗೂ ನಗರದ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.



