Connect with us

Dvgsuddi Kannada | online news portal | Kannada news online

ಕೇಂದ್ರ ಬಜೆಟ್ ; ಕೃಷಿ ವಲಯಕ್ಕೆ ಸಿಕ್ಕಿದ್ದೇನು..?; ಕಿಸಾನ್ ಕ್ರೆಡಿಟ್ ಕಾರ್ಡ್​ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ

ಪ್ರಮುಖ ಸುದ್ದಿ

ಕೇಂದ್ರ ಬಜೆಟ್ ; ಕೃಷಿ ವಲಯಕ್ಕೆ ಸಿಕ್ಕಿದ್ದೇನು..?; ಕಿಸಾನ್ ಕ್ರೆಡಿಟ್ ಕಾರ್ಡ್​ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಕೇಂದ್ರ ಬಜೆಟ್ (Union budget) 2025ರಲ್ಲಿ ಕೃಷಿ ವಲಯಕ್ಕೆ ಕೆಲ ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಪ್ರಮುಖವಾಗಿ, ಕಿಸಾನ್ ಕ್ರೆಡಿಟ್ ಕಾರ್ಡ್​ (kisan credit Cad) ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡಿದ್ದಾರೆ. ಬಜೆಟ್‌ನಲ್ಲಿ ಕೃಷಿ ವಲಯಕ್ಕೆ (Agriculture sector)  ಆದ್ಯತೆ ನೀಡಲಾಗಿದ್ದು, ಪ್ರಧಾನಮಂತ್ರಿ ಧನಧಾನ್ಯ ಯೋಜನೆ ಘೋಷಣೆಯಾಗಿದೆ. ದ್ವಿದಳ ಧಾನ್ಯಗಳ ಸ್ವಾವಲಂಬನೆಗೆ ಒತ್ತು ನೀಡಲಾಗುವುದು. ಬಿಹಾರದಲ್ಲಿ ಮಖಾನಾ ಮಂಡಳಿ ಸ್ಥಾಪನೆಯಾಗಲಿದೆ.

ಈ ಬಜೆಟ್ ದೇಶದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು, ಒಟ್ಟಾರೆ ಅಭಿವೃದ್ಧಿಯನ್ನು ಸಾಧಿಸಲು, ಖಾಸಗಿ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಲು, ದೇಶೀಯ ಸೂಕ್ಷ್ಮತೆಗಳನ್ನು ಬಲಪಡಿಸಲು ಮತ್ತು ಮಧ್ಯಮ ವರ್ಗದ ವೆಚ್ಚದ ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೃಷಿ ಎನ್ನುವುದು ಭಾರತದ ಅಭಿವೃದ್ಧಿಯ ಮೊದಲ ಇಂಜಿನ್‌ ಎಂದು ಹೇಳಿದ ಅವರು, ಪ್ರಧಾನಮಂತ್ರಿ ಧನಧಾನ್ಯ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ದ್ವಿದಳ ಧಾನ್ಯಗಳಲ್ಲಿ ಸ್ವಾವಲಂಬನೆ ಸಾಧಿಸುವ ಯೋಜನೆಯಲ್ಲಿ ತೊಗರಿ, ಉದ್ದು, ಮಸೂರ್‌ ಬೇಳೆಗಳಿಗೆ ವಿಶೇಷ ಗಮನ ನೀಡಲಾಗುವುದು. ಧನ್ ಧಾನ್ಯ ಯೋಜನೆಯ ಭಾಗವಾಗಿ ರೈತರಿಂದ ನಾಫೆಡ್ ಮತ್ತು ಎನ್‌ಸಿಸಿಎಫ್ ದ್ವಿದಳ ಧಾನ್ಯಗಳನ್ನು ಸಂಗ್ರಹಿಸಲಿವೆ ಎಂದು ಮಾಹಿತಿ ನೀಡಿದರು. ಅದರೊಂದಿಗೆ ಬಿಹಾರದಲ್ಲಿ ಮಖಾನಾ ಮಂಡಳಿ ಸ್ಥಾಪನೆಯಾಗಲಿದ್ದ, ಹೆಚ್ಚಿನ ಇಳುವರಿ ನೀಡುವ ಬೀಜಗಳ ಮೇಲಿನ ರಾಷ್ಟ್ರೀಯ ಮಿಷನ್ ಆರಂಭವಾಗಲಿದೆ ಎಂದು ತಿಳಿಸಿದರು.

ಕಿಸಾನ್ ಕ್ರೆಡಿಟ್ ಕಾರ್ಡ್ ; ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್​ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಿಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈಗಾಗಲೇ ಇರುವ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ನ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡುವ ಘೋಷಣೆಯನ್ನು ಕೆಂದ್ರ ಬಜೆಟ್‌ನಲ್ಲಿ ಮಾಡಲಾಗಿದೆ. ಬಿಹಾರದಲ್ಲಿ ಆಹಾರ ಸಂಸ್ಕರಣೆಗಾಗಿ ರಾಷ್ಟ್ರೀಯ ಉತ್ಪಾದನಾ ಮಿಷನ್ ಅನ್ನು ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ ಎಂದು ಹೇಳಿದರು.

  • ಪ್ರಮುಖ ಅಂಶ
  • 100 ಕಡಿಮೆ ಉತ್ಪಾದಕತೆ ಜಿಲ್ಲೆಗಳ ಮೇಲೆ ಕೇಂದ್ರೀಕರಿಸಲಿರುವ ಧನ ಧಾನ್ಯ ಕೃಷಿ ಯೋಜನೆ
  • 1.7 ಕೋಟಿ ರೈತರಿಗೆ ಸಹಾಯ ಮಾಡುವ ಕೃಷಿ ಕಾರ್ಯಕ್ರಮ
  • ಕಡಿಮೆ ಉತ್ಪಾದಕತೆ ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುವ ಕೃಷಿ ಯೋಜನೆ
  • ಖಾದ್ಯ ತೈಲ ಮತ್ತು ಬೀಜಗಳ ರಾಷ್ಟ್ರೀಯ ಮಿಷನ್ ಈ ವಲಯದಲ್ಲಿ ಆತ್ಮನಿರ್ಭರತೆಯನ್ನು ಗುರಿಯಾಗಿರಿಸಿಕೊಂಡಿದೆ
  • ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರವಾಗಲು 6 ವರ್ಷಗಳ ಮಿಷನ್ ಅನ್ನು ಪ್ರಾರಂಭಿಸಲಿದೆ
  • ಮುಂದಿನ 4 ವರ್ಷಗಳಲ್ಲಿ ತುರ್, ಉರಾದ್, ಮಸೂರ್ ಅನ್ನು ಸಂಗ್ರಹಿಸಲು ಕೇಂದ್ರ ಸಂಸ್ಥೆಗಳು
  • ಸಂಸ್ಕರಣೆ, ಮೌಲ್ಯವರ್ಧನೆಯನ್ನು ಸುಧಾರಿಸಲು ಬಿಹಾರದಲ್ಲಿ ಮಖಾನಾ ಮಂಡಳಿಯನ್ನು ರಚಿಸಲಾಗುವುದು

ಯೂರಿಯಾ ಸ್ಥಾವರ ಸ್ಥಾಪನೆ: ಯೂರಿಯಾ ಪೂರೈಕೆಯನ್ನು ಮತ್ತಷ್ಟು ಹೆಚ್ಚಿಸಲು ಅಸ್ಸಾಂನಲ್ಲಿ ಯೂರಿಯಾ ಸ್ಥಾವರವನ್ನು ಸ್ಥಾಪಿಸಲಾಗುವುದು ಎಂದು ಘೋಷಣೆ ಮಾಡಲಾಗಿದೆ. ಅಸ್ಸಾಂನ ನಮ್ರಪ್‌ನಲ್ಲಿ ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ ಸ್ಥಾವರವನ್ನು ಸರ್ಕಾರ ಸ್ಥಾಪಿಸಲಿದೆ. ಅದರೊಂದಿಗೆ ದೇಶದ ಪೂರ್ವ ಪ್ರದೇಶದಲ್ಲಿ 3 ನಿಷ್ಕ್ರಿಯ ಯೂರಿಯಾ ಸ್ಥಾವರಗಳನ್ನು ಮತ್ತೆ ತೆರೆಯಲಾಗಿದೆ ಎಂದು ಮಾಹಿತಿ ನೀಡಿದರು. ಗುಣಮಟ್ಟದ ಹತ್ತಿಗಾಗಿ ಹೆಚ್ಚುವರಿ ಉದ್ದವಾದ ಪ್ರಧಾನ ಹತ್ತಿ ಪ್ರಭೇದಗಳಿಗೆ ಸಹಾಯ ಮಾಡಲು ಐದು ವರ್ಷಗಳ ಕಾಲ ಹತ್ತಿ ಉತ್ಪಾದಕತೆಗಾಗಿ ಮಿಷನ್ ಘೋಷಣೆಯಾಗಿದೆ. ಇದು ಭಾರತದ ಸಾಂಪ್ರದಾಯಿಕ ಜವಳಿ ವಲಯವನ್ನು ಪುನರುಜ್ಜೀವನಗೊಳಿಸುವ ನಿರೀಕ್ಷೆಯಿದೆ ಎಂದಿದ್ದಾರೆ.

ಪ್ರಧಾನ ಮಂತ್ರಿ ಧನಧಾನ್ಯ ಯೋಜನೆ: ಪ್ರಧಾನ ಮಂತ್ರಿ ಧನಧಾನ್ಯ ಕೃಷಿ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗುತ್ತಿದೆ. ಇದು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದಲ್ಲದೆ ಧನ್ ಧಾನ್ಯ ಕೃಷಿ ಯೋಜನೆಯಿಂದ 100 ಕಡಿಮೆ ಉತ್ಪಾದಕತೆ ಜಿಲ್ಲೆಗಳ ಮೇಲೆ ಗಮನ ಹರಿಸಲಾಗುತ್ತಿದೆ. 1.7 ಕೋಟಿ ರೈತರಿಗೆ ಸಹಾಯ ಮಾಡಲು ಕೃಷಿ ಕಾರ್ಯಕ್ರಮ ಯೋಜಿಸಲಾಗಿದೆ. ಕಡಿಮೆ ಉತ್ಪಾದಕತೆ ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳಲು ಕೃಷಿ ಯೋಜನೆ ರೂಪಿಸಲಾಗುತ್ತಿದೆ.

ಖಾದ್ಯ ತೈಲ ಮತ್ತು ಬೀಜಗಳ ರಾಷ್ಟ್ರೀಯ ಮಿಷನ್ ಈ ವಲಯದಲ್ಲಿ ಆತ್ಮನಿರ್ಭರ್ ಆಗುವ ಗುರಿ ಹೊಂದಲಾಗಿದೆ. ದ್ವಿದಳ ಧಾನ್ಯಗಳಲ್ಲಿ ಆತ್ಮನಿರ್ಭರ್ ಆಗಲು 6 ವರ್ಷಗಳ ಮಿಷನ್ ಅನ್ನು ಕೇಂದ್ರ ಸರ್ಕಾರ ಪ್ರಾರಂಭಿಸಲಿದೆ. ಮುಂದಿನ 4 ವರ್ಷಗಳಲ್ಲಿ ಟರ್, ಉರಾದ್, ಮಸೂರ್ ಖರೀದಿಸಲು 6 ಕೇಂದ್ರ ಸಂಸ್ಥೆಗಳು ತಲೆ ಎತ್ತಲಿವೆ. ಅಂತೆಯೇ ಸಂಸ್ಕರಣೆ, ಮೌಲ್ಯವರ್ಧನೆ ಸುಧಾರಿಸಲು ಬಿಹಾರದಲ್ಲಿ ಮಖಾನಾ ಮಂಡಳಿಯನ್ನು ರಚಿಸಲಾಗುವುದು ಎಂದು ಹೇಳಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top