ಡಿವಿಜಿ ಸುದ್ದಿ, ಚಿಕ್ಕಮಗಳೂರು: ರಾಜ್ಯ ಕಂದಾಯ ಇಲಾಖೆಯು ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ 50 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿಯಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ವೆಬ್ ಸೈಟ್ https://chikkamagaluru.nic.in ಭೇಟಿ ನೀಡಿ.
ವಿದ್ಯಾರ್ಹತೆ: ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ದ್ವೀತಿಯ ಪಿಯುಸಿ, ಅಥವಾ ತತ್ಸಮಾನ ವಿದ್ಯಾರ್ಹತೆ. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ
ವೇತನ ಶ್ರೇಣಿ: 21,400– 42,000 ಶ್ರೇಣಿಯಲ್ಲಿ ವೇತನ
ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ 150, ಇತರೆ ಅಭ್ಯರ್ಥಿಗಳಿಗೆ 300.
ವಯೋಮಿತಿ
1) ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 35 ವರ್ಷ
2) ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 38 ವರ್ಷ
3) ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 24 ವರ್ಷ, ಗರಿಷ್ಠ 40 ವರ್ಷ
ನೇಮಕಾತಿ ವಿಧಾನ: ದ್ವಿತೀಯ ಪಿಯುಸಿಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವ ಕಡೆ ದಿನಾಂಕ: 20-03-2020
ವೆಬ್ಸೈಟ್: https://chikkamagaluru.nic.in



