Connect with us

Dvgsuddi Kannada | online news portal | Kannada news online

ರಾಜ್ಯದ ವಿವಿಧ ಇಲಾಖೆಯಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ; ವಿಧಾನಸಭೆಗೆ ಸಿಎಂ ಮಾಹಿತಿ

Vidhana Soudha

ಪ್ರಮುಖ ಸುದ್ದಿ

ರಾಜ್ಯದ ವಿವಿಧ ಇಲಾಖೆಯಲ್ಲಿ 2.76 ಲಕ್ಷ ಹುದ್ದೆಗಳು ಖಾಲಿ; ವಿಧಾನಸಭೆಗೆ ಸಿಎಂ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2,76,386 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.

ದಾವಣಗೆರೆ: ಕೋಳಿ ಶೀತ ಜ್ವರಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸ್ಪಷ್ಟನೆ

ಕಾಂಗ್ರೆಸ್‌ನ ಶಾಸಕ ರವಿಕುಮಾರಗೌಡ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ಒಟ್ಟು 7,80,748 ಮಂಜೂರಾದ ಹುದ್ದೆಗಳ ಪೈಕಿ 5,04,362 ಹುದ್ದೆಗಳು ಮಾತ್ರ ಭರ್ತಿಯಾಗಿವೆ. 2,76,386 ಹುದ್ದೆಗಳು ಖಾಲಿ ಇವೆ ಎಂದರು.

  • ಯಾವ ದರ್ಜೆಯ ಹುದ್ದೆ ಖಾಲಿ ಇವೆ..?
  • ಎ ದರ್ಜೆಯ 16,017
  • ಬಿ ದರ್ಜೆಯ 16,734
  • ಸಿ ದರ್ಜೆಯ 1,66,021
  • ಡಿ ದರ್ಜೆಯ 77,614

ದಾವಣಗೆರೆ: ಮಾ.15 ರಂದು ಐಟಿಐ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ; ಮೇಳದ ಪೋಸ್ಟರ್‍ ಬಿಡುಗಡೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಅತ್ಯಧಿಕ 70,727 ಹುದ್ದೆಗಳು ಖಾಲಿ ಇವೆ. ಗೃಹ ಇಲಾಖೆಯಲ್ಲಿ 26,168, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,227, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ 10,898, ಪಶುಸಂಗೋಪನಾ ಇಲಾಖೆಯಲ್ಲಿ 10,755, ಸಮಾಜ ಕಲ್ಯಾಣ ಇಲಾಖೆಯಲ್ಲಿ 9,980, ಆರ್ಥಿಕ ಇಲಾಖೆಯಲ್ಲಿ 9,536, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 8,334 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top