ಡಿವಿಜಿ ಸುದ್ದಿ , ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗ್ಗೆ 9 ಗಂಟೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಇದಕ್ಕೂ ಮುನ್ನ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೂ ಕಾಲ್ನಡಿಗೆ ಜಾಥ ನಡೆಸಿದರು. ಈ ವೇಳೆ ಬೇಡಿಕೆ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳ ಜೊತೆ ಅವರ ಕುಟುಂಬ ಸದಸ್ಯರು ಭಾಗವಹಿಸಿದ್ದಾರೆ. ಸಿಬ್ಬಂದಿಗಳ ಸತ್ಯಾಗ್ರಹದಿಂದ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ .
ಸಂಜೆ ವರೆಗೂ ಸತ್ಯಾಗ್ರಹ ನಡೆಯಲಿದ್ದು, ವಿವಿಧ ಡಿಪೋಗಳಿಂದ ಸಾವಿರಾರು ನೌಕರರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ . ಪ್ರತಿಭಟನೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.



