ದಾವಣಗೆರೆ:‌ ಮೊಟ್ಟೆ ಎಸೆತ, ಒತ್ತಾಯ ಪೂರ್ವಕ ಬಣ್ಣ ಎರಚುವವರ ವಿರುದ್ಧ ಕಾನೂನು ಕ್ರಮ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯಾದ್ಯಂತ ಮಾ.13ರಂದು ಕಾಮದಹನ, 14 ರಂದು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಈ ಸಂಧರ್ಭದಲ್ಲಿ ಜಿಲ್ಲೆಯಾದ್ಯಾಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಸಾರ್ವಜನಿಕರಿಗೆ ಜಿಲ್ಲಾ ಪೊಲೀಸ್ ಸೂಚನೆ ನೀಡಿದೆ.

ದಾವಣಗೆರೆ: ಬೃಹತ್ ಉದ್ಯೋಗ ಮೇಳ, 50 ಕ್ಕೂ ಹೆಚ್ಚು ಕಂಪನಿಗಳು ಭಾಗಿ, ಈ ಲಿಂಕ್ ಮೂಲಕ ಹೆಸರು ನೋಂದಣಿ ಮಾಡಿ

  • ಜಿಲ್ಲಾ ಪೊಲೀಸ್ ಸೂಚನೆ ಏನು..?
  • ಯಾವುದೇ ವ್ಯಕ್ತಿಗಳ ಮೇಲೆ ಒತ್ತಾಯ ಪೂರ್ವಕವಾಗಿ ಬಣ್ಣ ಎರಚುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
  • ಪಿಯುಸಿ ಪರೀಕ್ಷೆಗಳು ಹಾಗೂ ಇತರೆ ಪರೀಕ್ಷೆಗಳು ನಡೆಯುತ್ತಿರುವುದರಿಂದ ಪರೀಕ್ಷೆಗೆ ಹಾಜರಾಗುವಂತಹ ವಿದ್ಯಾರ್ಥಿಗಳಿಗೆ ಯಾವುದೇ ಬಣ್ಣ ಎರಚಬಾರದು, ಯಾರಾದರೂ ಕಿಡಿಗೇಡಿತನಕ್ಕೆ ಮುಂದಾದಲ್ಲಿ ಕಠಿಣ ಕಾನೂನು
    ಕ್ರಮ ಜರುಗಿಸಲಾಗುವುದು
  • ಪೇಂಟ್, ವಾರ್ನಿಷ್, ಆಸಿಡ್, ಡಾಂಬರ್, ಗಾಣದ ಎಣ್ಣೆ, ಮೊಟ್ಟೆ ಹಾಗೂ ಯಾವುದೇ ಅಪಾಯಕಾರಿ ರಾಸಾಯನಿಕ ಮಿಶ್ರಣಗಳನ್ನು ಮೈಮೇಲೆ ಎರಚುವವರ ವಿರುದ್ಧ ಮತ್ತು ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರ ಮತ್ತು
    ನೌಕರರು ಹಾಗೂ ಶಾಲಾ ವಿದ್ಯಾರ್ಥಿಗಳ ಮೇಲೆ ಬಣ್ಣ ಎರಚುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು
  • ಸಾರ್ವಜನಿಕ ನೀರು ಸರಬರಾಜು ಸ್ಥಳಗಳಲ್ಲಿ ಬಣ್ಣ ತೊಳೆದು ನೀರನ್ನು ಮಲೀನ ಮಾಡಬಾರದು
  • ಹೋಳಿ ಹಬ್ಬದ ನೆಪದಲ್ಲಿ ಸಾರ್ವಜನಿಕರಿಂದ ಒತ್ತಾಯ ಪೂರ್ವಕವಾಗಿ ಹಣ ವಸೂಲಿ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು
  • ವಿಶೇಷವಾಗಿ ಮೆಡಿಕಲ್ ಮತ್ತು ಇಂಜಿನಿಯರ್ ವಿದ್ಯಾರ್ಥಿಗಳು ಒಂದು ವಿದ್ಯಾರ್ಥಿ ನಿಲಯದಿಂದ ಇನ್ನೊಂದು ವಿದ್ಯಾರ್ಥಿ ನಿಲಯಕ್ಕೆ ಹೋಗಿ ಬಣ್ಣ ಎರಚುವುದಾಗಲಿ ಅಥವಾ ಮಹಿಳಾ ವಿದ್ಯಾರ್ಥಿ ನಿಲಯಗಳ ಬಳಿ ತೆರಳಿ ಮಹಿಳಾ ವಿದ್ಯಾರ್ಥಿಗಳ ಮೇಲೆ ಬಣ್ಣ ಎರಚುವುದನ್ನು ನಿಷೇಧಿಸಿದ್ದು, ಯಾರಾದರೂ ಕಿಡಿಗೇಡಿತನಕ್ಕೆ ಮುಂದಾದಲ್ಲಿ
    ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು
  • ಧ್ವನಿವರ್ಧಕ ಅಳವಡಿಕೆ ನಿಯಮವನ್ನು ಮತ್ತು ಅನುಮತಿಯನ್ನು ಸಂಬಂಧಪಟ್ಟ ಆಯೋಜಕರು ಕಟ್ಟುನಿಟ್ಟಾಗಿ ಪಾಲಿಸುವುದು.
  • ಬಣ್ಣ ಎರಚುವ ನೆಪದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ಮಾಡುವವರು, ಚುಡಾಯಿಸುವವರು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಲಾಗುವುದು
  • ಮದ್ಯಪಾನ ಸೇವನೆ ಮಾಡಿ ಅತಿವೇಗ ಅಪಾಯಕಾರಿಯಾಗಿ ವಾಹನ ಚಾಲನೆ ಮಾಡುವವರ ವಿರುದ್ಧ ಕಾನೂನು
    ಕ್ರಮ ಜರುಗಿಸುವುದು
  • ಬಣ್ಣ ಹಚ್ಚುವ ಸಮಯದ ಕೊನೆಯ ಹಂತದಲ್ಲಿ ಕೆಲವು ಕಿಡಿಗೇಡಿಗಳು ಮೈ ಮೇಲಿನ ಬಟ್ಟೆಗಳನ್ನು ಹರಿದು ಸಾರ್ವಜನಿಕವಾಗಿ ಅಸಹ್ಯವಾಗುವ ರೀತಿಯಲ್ಲಿ ನೃತ್ಯ ಮಾಡುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದು
  • ಧಾರ್ಮಿಕ ಕಟ್ಟಡಗಳಾದ ಚರ್ಚು, ಮಸೀದಿ, ದರ್ಗಾ ಮತ್ತು ದೇವಾಲಯಗಳಿಗೆ ಬಣ್ಣ ಎರಚವಂತಿಲ್ಲ
  • ದ್ವಿಚಕ್ರ ವಾಹನಗಳಲ್ಲಿ 3 ಜನರು ಸೇರಿ ಸವಾರಿ ಮಾಡಿಕೊಂಡು ಚಲಿಸುವುದಾಗಲೀ, ಬೈಕ್ ವೀಲಿಂಗ್ ಮಾಡುವುದಾಗಲೀ, ವಾಹನದ ಸೈಲೆನ್ಸ್ರ್‌ಗಳನ್ನು ತೆಗೆದು ಕರ್ಕಶವಾದ ಶಬ್ದವನ್ನು ಉಂಟುಮಾಡುವ ಸೈಲೆನ್ಸ್ರ್‌ಗಳನ್ನು ಉಪಯೋಗಿಸುವುದು ಕಂಡುಬಂದಲ್ಲಿ ಅಂತಹ ವಾಹನಗಳನ್ನು ಸ್ವಾದೀನ ಪಡಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು
  • ದ್ವಿಚಕ್ರ ವಾಹನಗಳ ನಂಬರ್ ಪ್ಲೇಟ್‌ಗಳಿಗೆ ನಂಬರ್ ಕಾಣದಂತೆ ಬಟ್ಟೆ ಕಟ್ಟುವುದು ಹಾಗೂ ಬಣ್ಣ, ಗ್ರೀಸ್ ಹಚ್ಚಿಕೊಂಡು ಸಂಚರಿಸುವುದು ಅಪರಾಧವಾಗುತ್ತದೆ. ಅಂತಹ ವಾಹನಗಳು ಕಂಡುಬAದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು
  • ಕಾಮದಹನವನ್ನು ಹಾಗೂ ಹೋಳಿ ಹಬ್ಬವನ್ನು ನಿಗದಿತ ಸಮಯಕ್ಕೆ ಮುಕ್ತಾಯ ಮಾಡುವುದು.
  • ಹೋಳಿ ಹಬ್ಬದ ಸಂಬಂಧ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪ್ರಚೋಧನಕಾರಿ ಪೋಸ್ಟರ್ ಗಳನ್ನು ಹಾಕುವುದಾಗಲೀ, ಸುಳ್ಳುಸುದ್ದಿ-ಪ್ರಚೋದನಕಾರಿ ಸಂಧೇಶಗಳನ್ನು ಹರಿಬಿಡುವುದಾಗಲಿ ಹಾಗೂ ಯಾವುದೇ ಧರ್ಮದ ವಿರುದ್ದ / ವ್ಯಕ್ತಿಯ ವಿರುದ್ದಅವಹೇಳನಕಾರಿ ಪೋಸ್ಟರ್ /ಸಂದೇಶಗಳನ್ನುಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದು/ ರವಾನಿಸುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಕ್ರಮ ವಹಿಸಲಾಗುವುದು
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *