ದಾವಣಗೆರೆ: ಕರ್ನಾಟಕ ಬಂದ್; ಬಲವಂತವಾಗಿ ಶಾಲಾ-ಕಾಲೇಜು, ಅಂಗಡಿ ಮುಂಗಟ್ಟು ಮುಚ್ಚಿಸುವಂತಿಲ್ಲ- ಜಿಲ್ಲಾ ಪೊಲೀಸ್ ಎಚ್ಚರಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ನಾಳೆಯ (ಮಾ.22) ಕರ್ನಾಟಕ ಬಂದ್ ವೇಳೆ ಬಂದ್ ಕರೆ ಸಂಬಂಧ ಘನ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆಮಾಡುವಂತಿಲ್ಲ.‌ ಒತ್ತಾಯಪೂರ್ವಕವಾಗಿ ಅಥವಾ ಬಲವಂತವಾಗಿ ಯಾವುದೇ ಶಾಲಾ-ಕಾಲೇಜು, ಸರ್ಕಾರಿ/ಖಾಸಗಿ ಸಂಸ್ಥೇಗಳನ್ನು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ, ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತಿ ಕ್ರಮವಹಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಎಚ್ಚರಿಕೆ ನೀಡಿದೆ.

ಕರ್ನಾಟಕ ಬಂದ್ ; ವಿವಿಧ ಸಂಘಟನೆಗಳ ಬೆಂಬಲ- ಕೆಲ ಸಂಘಟನೆಗಳು ನೈತಿಕ ಬೆಂಬಲ-ಏನಿರುತ್ತೆ? ಏನಿರಲ್ಲ?

ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮತ್ತು ಇತರೆ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಕನ್ನಡ ಕಂಡಕ್ಟರ್ ಮೇಲೆ ಮರಾಠಿಗಳ ದಾಳಿ, ಎಂ.ಇ.ಎಸ್ ನಿಷೇಧ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಸಂಬಂಧ ಸರ್ಕಾರವನ್ನು ಒತ್ತಾಯಿಸುವ ಸಲುವಾಗಿ ಮಾರ್ಚ್ 22 ರಂದು ಕರ್ನಾಟಕೆ ಬಂದ್ ಕರೆ ನೀಡಿದ್ದು, ಈ ಸಂಬಂಧ ವಿವಿಧ ಸಂಘಟನೆಗಳು ಬಂದ್ ಕರೆಗೆ ಬೆಂಬಲ ವ್ಯಕ್ತಪಡಿಸಿರುವುದು ತಿಳಿದು ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಸೂಚನೆ ನೀಡಲಾಗಿದೆ.

ದಾವಣಗೆರೆ: ಅಡಿಕೆ ಧಾರಣೆ; ಸತತ ಕುಸಿತ‌ ಬಳಿಕ ಭರ್ಜರಿ ಏರಿಕೆ – ಮಾ.21ರ ದರ ಎಷ್ಟಿದೆ..?

  • ಬಂದ್ ಕರೆ ಸಂಬಂಧ ಘನ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡುವಂತಿಲ್ಲ
  • ಒತ್ತಾಯಪೂರ್ವಕವಾಗಿ ಅಥವಾ ಬಲವಂತವಾಗಿ ಯಾವುದೇ ಶಾಲಾ-ಕಾಲೇಜು, ಸರ್ಕಾರಿ/ಖಾಸಗಿ ಸಂಸ್ಥೇಗಳನ್ನು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ, ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು
  • ಬಂದ್ ಸಂಬಂಧ ಸಾರ್ವಜನಿಕರ ಜನ-ಜೀವನಕ್ಕೆ, ವಾಹನ ಮತ್ತು ಆಸ್ತಿ-ಪಾಸ್ತಿ ನಾಶ ಮಾಡುವಂತಿಲ್ಲ
  • ಯಾವುದೇ ರಸ್ತೆ ತಡೆಗೆ ಹಾಗೂ ವಾಹನ ಅಡ್ಡಗಟ್ಟುವುದಕ್ಕೆ ಅವಕಾಶ ಇಲ್ಲ ಮತ್ತು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು
  • ಯಾವುದೇ ಕಾರಣಕ್ಕೂ ತುರ್ತು ಸೇವೆಗಳಿಗೆ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ಅಡ್ಡಿಪಡಿಸುವಂತಿಲ್ಲ
  • ಬಂದ್ ಸಂಬಂಧ ರಸ್ತೆ / ಸಾರ್ವಜನಿಕ ಸ್ಥಳಗಳಲ್ಲಿ ಟಯರ್ಗಳನ್ನು ಹಾಕಿ ಹಚ್ಚಲು ಮತ್ತು ಯಾವುದೇ ಪ್ರತಿಕೃತಿಗಳನ್ನು ದಹನ ಮಾಡಲು ಅವಕಾಶವಿರುವುದಿಲ್ಲ
  • ಬಂದ್ ಹೆಸರಿನಲ್ಲಿ ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದಾಗಿ ತಿಳಿಸಿದೆ
  • ಬಂದ್ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡುವುದು, ಕಾನೂನು ಸುವ್ಯವಸ್ಥೆಗೆ ದಕ್ಕೆ ಬರುವಂತಹ ಪೋಸ್ಟ್ಗಳನ್ನು ಹಾಕುವುದಾಗಲೀ ಹಾಗು ಶೇರ್ ಮಾಡುವುದಾಗಲೀ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಾಲಾಗುವುದು
  • ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿಯುತವಾಗಿ ಹಾಗೂ ಸೌಹಾರ್ಧಯುತವಾಗಿ ಪ್ರತಿಭಟನೆ ನಡೆಸುವುದು, ಯಾವುದೇ ಅಹಿತಕರ ಘಟನೆಗಳು ಕಂಡುಬಂದರೆ ತುರ್ತು ಸಹಾಯವಣಿ 112 ಗೆ ಕರೆ ಮಾಡುವುದು ಹಾಗೂ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಮಾಹಿತಿ ನೀಡುವುದು
  • ಬಂದ್ ಮುನ್ನೇಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ವತಿಯಿಂದ, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಸಶಸ್ತ್ರ ತುಕಡಿಗಳನ್ನು ಹಾಗೂ ಬಂದ್ ಸಮಯದಲ್ಲಿ ನಗರದಲ್ಲಿ ಕಣ್ಗಾವಲಿಗಾಗಿ ಡ್ರೋನ್ ಗಳನ್ನು ನಿಯೋಜಿಸಲಾಗಿರುತ್ತದೆ
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *