ಬೆಂಗಳೂರು: ಇಂದಿನ ಕರ್ನಾಟಕ ಬಂದ್(Karnataka bandh) ಹಿನ್ನೆಲೆ ಶಾಲೆಗಳಿಗೆ ರಜೆ ಇರುವುದಿಲ್ಲ. ಒಂದು ವೇಳೆ ಸಾರಿಗೆ ಸಮಸ್ಯೆಯಾದರೆ ಮಾತ್ರ ಬದಲಾವಣೆ ಮಾಡುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಭದ್ರತೆ, ಸಾರಿಗೆ ವಿಚಾರವಾಗಿ ಸಂಬಂಧಿಸಿದ ಸಚಿವರ ಜತೆ ಮಾತುಕತೆ ನಡೆಸುತ್ತೇವೆ. 5 ಸಾವಿರ ವಿಶೇಷಚೇತನ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಸರಕಾರದ ಕರ್ತವ್ಯ. ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶಗಳಿದ್ದು ಈ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್ 22ರಂದು ನಾಳೆ ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟಬೆಗಳು ಹಾಗೂ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಬಂದ್ ಗೆ ಕರೆ ನೀಡಿದ್ದಾರೆ.
ಇನ್ನು ನಕಲಿ ಪ್ರಶ್ನೆ ಪತ್ರಿಕೆಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿರುವ ಬಗ್ಗೆ ಪ್ರಶ್ನಿಸಿದಾಗ, ನನಗೆ ಗೊತ್ತಿದ್ದರೂ ಇದರ ಬಗ್ಗೆ ಚರ್ಚೆ ಮಾಡಲ್ಲ. ಮಕ್ಕಳು ಮುಗªರಿದ್ದು ಅವರಿಗೆ ಗೊತ್ತಾಗಲ್ಲ. ಯಾರು ಈ ರೀತಿ ಮಾಡಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಮಧು ಬಂಗಾರಪ್ಪ ತಿಳಿಸಿದರು.



