ದಾವಣಗೆರೆ: ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು, ಕಲ್ಯಾಣ ಕರ್ನಾಟಕ ಭಾಗಕ್ಕೆ 5ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು ಸದ್ಯದಲ್ಲಿಯೇ ನೇಮಕಾತಿಯ ಪ್ರಕ್ರಿಯೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ಮುಂದಿನ ಮೂರ್ನಾಲ್ಕು ದಿನ ಕೆಲ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಮುನ್ಸೂಚನೆ
ಚನ್ನಗಿರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ಅತಿಥಿ ಶಿಕ್ಷಕರಿಗೆ ಅಧಿಕಾರಿಗಳ ಲೋಪದಿಂದ ವೇತನ ನೀಡುವುದು ವಿಳಂಬವಾಗುತ್ತಿದ್ದು ಸರ್ಕಾರದಲ್ಲಿ ಹಣವಿದ್ದರೂ ಸಹ ವೇತನ ಸರಿಯಾಗಿ ಆಗುತ್ತಿರಲಿಲ್ಲ. ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಅತಿಥಿ ಶಿಕ್ಷಕರಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮಾ.25 ರಂದು ಉದ್ಯೋಗಮೇಳ
ನಾನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷನಾಗಿದ್ದು ಕೊಟ್ಟ ಭರವಸೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಒ.ಪಿ.ಎಸ್ ಅನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದರು.
ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅಧಿಕ ಅನುದಾನ ನೀಡಿದ್ದ, ರಾಜ್ಯದಲ್ಲಿ ಕೆಪಿಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು ಪ್ರಸ್ತುತ 300 ಕೆ.ಪಿ.ಎಸ್ ಶಾಲೆಗಳಿದ್ದು ಪ್ರಸ್ತುತ ವರ್ಷದಲ್ಲಿ 500ಕ್ಕೂ ಹೆಚ್ಚು ಕೆ.ಪಿ.ಎಸ್ ಶಾಲೆಗಳನ್ನು ತೆರೆಯಲಾಗುವುದು ಎಂದರು. ಅಧುನಿಕ ತಂತ್ರಜ್ಞಾನದಿಂದ ಇಂದಿನ ಮಕ್ಕಳ ಕಲಿಕೆಯಲ್ಲಿ ಕುಂಠಿತವಾಗುತ್ತಿದ್ದು ಮಾನವೀಯ ಮೌಲ್ಯಗಳು ಸಹ ಕ್ಷೀಣಿಸುತ್ತಿವೆ. ಮುಂದಿನ ವರ್ಷದಿಂದ 1ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಭೋದನೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.
ವಾರದಲ್ಲಿ ಎರಡು ದಿನ ನೈತಿಕ ಶಿಕ್ಷಣ, ಎರಡು ದಿನ ಬರವಣಿಗೆ, ಎರಡು ದಿನ ಓದುವ ಹವ್ಯಾಸಗಳ ಬಗ್ಗೆ ತಿಳಿಸಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ಶಾಲೆಗಳಿಗೂ ರಾಜ್ಯದಲ್ಲಿ ಅಧಿಕ ಬೇಡಿಕೆ ಇದ್ದು ಅವುಗಳನ್ನು ತೆರೆಯಲು ಸಿದ್ಧತೆಗಳು ನಡೆಯುತ್ತಿವೆ ಎಂದರು.



