Connect with us

Dvgsuddi Kannada | online news portal | Kannada news online

ದಾವಣಗೆರೆ: ಕೊಂಡಜ್ಜಿ ಕೆರೆ ಸಹಿತ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಪ್ರವಾಸಿ ತಾಣ ಅಭಿವೃದ್ಧಿ ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

kondajji lake 2

ದಾವಣಗೆರೆ

ದಾವಣಗೆರೆ: ಕೊಂಡಜ್ಜಿ ಕೆರೆ ಸಹಿತ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಪ್ರವಾಸಿ ತಾಣ ಅಭಿವೃದ್ಧಿ ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಕೊಂಡಜ್ಜಿ ಕೆರೆ ಸಹಿತ ಜಿಲ್ಲೆಯಲ್ಲಿನ ಆರು ತಾಲ್ಲೂಕಿನಲ್ಲಿನ ಪ್ರಮುಖ ಸ್ಥಳಗಳನ್ನು ಗುರುತಿಸಿ, ಅವುಗಳನ್ನು ಪ್ರವಾಸಿ ತಾಣಗಳಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ರಾಜ್ಯದಲ್ಲಿ ಏ.12 ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಕೊಂಡಜ್ಜಿ ಕೆರೆಯಲ್ಲಿ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆ ಹಾಗೂ ಬಾಲಕಿಯರಿಗೆ ಏರ್ಪಡಿಸಲಾದ ಜಲಸಾಹಸ ಕ್ರೀಡೆಯಲ್ಲಿ ವಿದ್ಯಾರ್ಥಿನಿಯರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದರು. ಜಿಲ್ಲೆಯ ಚನ್ನಗಿರಿ, ಹರಿಹರ ಮುಂತಾದ ಕ್ಷೇತ್ರಗಳಲ್ಲಿನ ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪ್ರವಾಸಿ ತಾಣಗಳನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು

ದಾವಣಗೆರೆ: ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಮನೆಯಲ್ಲಿ ಕಳ್ಳತನ; 4.8 ಲಕ್ಷ‌‌ ಮೌಲ್ಯದ ಚಿನ್ನ; ನಗದ ಕಳವು

ಮಹಿಳಾ ದಿನಾಚರಣೆಯ ಪ್ರಯುಕ್ತ ಕೆರೆಯಲ್ಲಿ ಮಹಿಳೆಯರಿಗಾಗಿ ಏಪ್ರಿಲ್ 7 ರವರೆಗೆ ಉಚಿತವಾಗಿ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಜಿಲ್ಲೆಯು ಕ್ರೀಡೆಗೆ ಪ್ರಸಿದ್ಧಿ. ಹಾಗಾಗಿ ಮಹಿಳೆಯರನ್ನು ಕ್ರೀಡಾ ವಿಭಾಗದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ದೃಷ್ಟಿಯಿಂದ ಇದನ್ನು ಪ್ರವಾಸಿ ತಾಣವಾಗಿಸಿ, ವಿವಿಧ ರೀತಿಯ ಜಲ ಸಾಹಸ ಕ್ರೀಡೆಗಳ ತರಬೇತಿ ನೀಡಲಾಗುವುದು.
ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಹಿಳಾ ದಿನಾಚರಣೆಯ ಪ್ರಯುಕ್ತ ಸ್ಪರ್ಧೆಗಳನ್ನು ಆಯೋಜಿಸಿ, ಸ್ಪರ್ಧೆಯಲ್ಲಿ ಜಯಗಳಿಸಿದ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಗೆ ಪ್ರಶಸ್ತಿ ಪತ್ರ ನೀಡಲಾಗುವುದು. ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಜಲ ಸಹಾಸ ಕ್ರೀಡೆಯಲ್ಲಿ ಭಾಗವಹಿಸದ ಸಂತೋಷದ ಕ್ಷಣ ಹಾಗೂ ಅನುಭವಗಳ ಕುರಿತು ಮಾಹಿತಿ ಪಡೆದರು. ನಾನು ಹಿಟ್ಟಿದ ಗ್ರಾಮ ಕಕ್ಕರಗೊಳ್ಳವಾಗಿದ್ದು ತಾಲ್ಲೂಕು ಮಟ್ಟದ ಸ್ಕೌಟ್ಸ್ ಅಂಡ್ ಗೈಡ್ ಕಾರ್ಯಕ್ರಮದಲ್ಲಿ ಕೊಂಡಜ್ಜಿಯಲ್ಲಿ ಭಾಗವಹಿಸಲಾಗಿತ್ತು. ಕೊಂಡಜ್ಜಿ ಕರೆಯಲ್ಲಿ ಜಲಸಾಹಸ ಕ್ರೀಡೆಗಳ ತರಬೇತಿಯನ್ನು ನೀಡಲು ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾ, ತರಬೇತುದಾರ ಶಬ್ಬೀರ್ ಹಾಗೂ ವಿದ್ಯಾಥಿಗಳು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top