Connect with us

Dvgsuddi Kannada | online news portal | Kannada news online

ಅಶೋಕ ಟಾಕೀಸ್ ಬಳಿಯ ರೈಲ್ವೆಗೇಟ್ ಸಮಸ್ಯೆ ಕೆಲವೇ ದಿನದಲ್ಲಿ ಬಗೆಹರಿಯಲಿದೆ: ಜಿ.ಎಂ ಸಿದ್ದೇಶ್ವರ್

ಪ್ರಮುಖ ಸುದ್ದಿ

ಅಶೋಕ ಟಾಕೀಸ್ ಬಳಿಯ ರೈಲ್ವೆಗೇಟ್ ಸಮಸ್ಯೆ ಕೆಲವೇ ದಿನದಲ್ಲಿ ಬಗೆಹರಿಯಲಿದೆ: ಜಿ.ಎಂ ಸಿದ್ದೇಶ್ವರ್

ಡಿವಿಜಿ ಸುದ್ದಿ, ದಾವಣಗೆರೆ:ಸಾಕಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಅಶೋಕ ಟಾಕೀಸ್ ಬಳಿ ರೈಲ್ವೆಗೇಟ್ ಸಮಸ್ಯೆ ಕೆಲವೇ ದಿನಗಳಲ್ಲಿ ಬಗೆಹರಿಯಲಿದೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಹೇಳಿದರು.

ನಗರದ ರೈಲು ನಿಲ್ದಾಣದಲ್ಲಿ ಏರ್ಪಡಿಸಲಾಗಿದ್ದ ಎರಡನೇ ಪ್ರವೇಶ ದ್ವಾರದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪಾಲಿಕೆಯ ಮೇಯರ್ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು. ದಾವಣಗೆರೆ ಜಿಲ್ಲೆಯನ್ನು  ರಾಜ್ಯದಲ್ಲೇ ನಂ.1 ಜಿಲ್ಲೆಯಾಗಿಸುವ ಹಂಬಲ ಹೊಂದಿದ್ದು ಹಂತ ಹಂತವಾಗಿ ಕೆಲಸಗಳನ್ನು ಕೈಗೊಳ್ಳಲಾಗುವುದು. 2024 ರ ವೇಳೆಗೆ ಶೇ.100 ರಷ್ಟು ರೈಲ್ವೆ ಲೈನ್  ವಿದ್ಯುದೀಕರಣಗೊಳ್ಳಲಿವೆ. ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ  ಸೇವೆ ನೀಡುವ ಸಲುವಾಗಿ 500 ಪ್ಯಾಸೆಂಜರ್ ಟ್ರೈನ್‍ಗಳನ್ನು ಮತ್ತು 750 ರೈಲ್ವೆ ನಿಲ್ದಾಣಗಳನ್ನು 2025 ರ ವೇಳೆಗೆ ಖಾಸಗಿಯವರಿಗೆ ವಹಿಸುವ ಬಗ್ಗೆ ರೈಲ್ವೆ ಸಚಿವಾಲಯ ಗಂಭೀರ ಚಿಂತನೆಯನ್ನು ನಡೆಸುತ್ತಿದೆ ಎಂದು ತಿಳಿಸಿದರು.

ಪ್ರತಿದಿನ ಸಾವಿರಾರು ಪ್ರಯಾಣಿಕರು ದಾವಣಗೆರೆ ರೈಲ್ವೆ ನಿಲ್ದಾಣದಿಂದ ಓಡಾಡುತ್ತಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಎರಡನೇ ಪ್ರವೇಶ ದ್ವಾರವನ್ನು ನಿರ್ಮಿಸಲಾಗಿದೆ. ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆಯಬೇಕೆಂದು ಸಂಸದರಾದ ಜಿ.ಎಂ.ಸಿದ್ದೇಶ್ವರ ನುಡಿದರು. ರೈಲ್ವೆ ನಿಲ್ದಾಣದ ಎರಡನೇ ಪ್ರವೇಶದ್ವಾರವನ್ನು ಸುಮಾರು 4.5 ಕೋಟಿ ವೆಚ್ಚಲ್ಲಿ ಅಭಿವೃದ್ದಿ ಪಡಿಸಲಾಗಿದೆ. ಫುಟ್‍ಓವರ್ ಬ್ರಿಡ್ಜ್, ಫ್ಲಾಟ್‍ಫಾರ್ಮ್ ಶೆಲ್ಟರ್, ಸ್ಟೇಷನ್ ಕಟ್ಟಡ, ಪಾರ್ಕಿಂಗ್ ವ್ಯವಸ್ಥೆ, ಗಾರ್ಡನ್ ಈ ಎಲ್ಲ ಸೌಲಭ್ಯವನ್ನು ಇಲ್ಲಿ ಒದಗಿಸಲಾಗಿದೆ. 15 ಕೋಟಿ ವೆಚ್ಚದಲ್ಲಿ ನೂತನ ರೈಲ್ವೇ ಸ್ಟೇಷನ್ ನಿರ್ಮಾಣ ಕಾರ್ಯ ನಡೆಯುತ್ತಿದೆ.  ಜುಲೈ ತಿಂಗಳ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಲಿದೆ.  ಪ್ರಯಾಣಿಕರ ಅನುಕೂಲಕ್ಕಾಗಿ ಈ ರೈಲ್ವೆ ನಿಲ್ದಾಣದಲ್ಲಿ ನಾಲ್ಕು ಎಸ್ಕಲೇಟರ್‍ಗಳನ್ನು ಸಹ ಅಳವಡಿಸಲು ಸೂಚಿಸಿದ್ದೇನೆ ಎಂದರು.

ಮಾಯಕೊಂಡದಿಂದ ಹರಿಹರದವರೆಗೆ ಈಗಾಗಲೇ ರೂ.250 ಕೋಟಿ ವೆಚ್ಚದಲ್ಲಿ ಡಬ್ಲಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಹುಬ್ಬಳ್ಳಿವರೆಗೆ ಮಾರ್ಚ್ 2020 ರ ವೇಳಗೆ ಡಬ್ಲಿಂಗ್ ಕಾಮಗಾರಿ ಪೂರ್ಣಗೊಳ್ಳಲಿದೆ. ಡಿಸಿಎಂ ಟೌನ್‍ಶಿಪ್ ಬಳಿ ಸೇತುವೆ ಅವೈಜ್ಞಾನಿಕವಾಗಿತ್ತು. ಅದನ್ನು ಪುನರ್‍ನಿರ್ಮಾಣ ಮಾಡಿಕೊಡಲು ಸೂಚಿಸಿದ್ದ ಮೇರೆಗೆ ಸುಮಾರು ರೂ.18 ಕೋಟಿ ವೆಚ್ಚದಲ್ಲಿ ಡಿಸಿಎಂ ಕೆಳಸೇತುವೆ ಕಾಮಗಾರಿ ನಡೀತಾ ಇದೆ. ಹರಿಹರದ ಅಮರಾವತಿ ಬಳಿ ರೈಲ್ವೆಗೇಟ್ 208 ಕ್ಕೆ 30 ಕೋಟಿ ವೆಚ್ಚದಲ್ಲಿ ಮೇಲು ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ಮಾಡಲಾಗುವುದು.

ಶಾಸಕರಾದ ಎಸ್.ಎ.ರವೀಂದ್ರನಾಥ್ ಮಾತನಾಡಿ,. ದಾವಣಗೆರೆ ನಗರದ ರೈಲ್ವೆ ನಿಲ್ದಾಣ ಆಧುನೀಕರಣಗೊಳ್ಳುತ್ತಿರುವುದು ಸಂತೋಷದ ವಿಷಯವಾಗಿದೆ. ರಾಜ್ಯದಲ್ಲಿ ದಾವಣಗೆರೆ ಉತ್ತಮವಾದ ರೈಲ್ವೆ ನಿಲ್ದಾಣ ಎಂಬ ಹೆಸರು ತರಲು ಸಂಸದರು ಪಣ ತೊಟ್ಟು ಕೆಲಸ ನಿರ್ವಹಿಸುತ್ತಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಗೆಸ್ಟ್‍ಹೌಸ್ ಸೇರಿದಂತೆ ಉತ್ತಮವಾಗಿ ನಿರ್ಮಾಣವಾಗುತ್ತಿದೆ ಎಂದರು.

ಮಹಾನಗರಪಾಲಿಕೆಯ ನೂತನ ಮೇಯರ್ ಬಿ.ಜೆ.ಅಜಯ್‍ಕುಮಾರ್ ಮಾತನಾಡಿ, ನಗರದ ರೈಲ್ವೆ ನಿಲ್ದಾಣದಲ್ಲಿ ಒಂದೇ ದ್ವಾರದಿಂದ ಜನರಿಗೆ ಸಾಕಷ್ಟು ತೊಂದರೆ ಆಗುತ್ತಿತ್ತು. ಇನ್ನೊಂದು ದ್ವಾರದ ಅವಶ್ಯಕತೆಯನ್ನು ಸಂಸದರು ಗುರುತಿಸಿ ಕೆಲಸ ಮಾಡಿಸಿದ್ದಾರೆ.  ಸಾರ್ವಜನಿಕರು ಇದರ ಸದುಪಯೋಗಪಡೆಯಬೇಕೆಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಯಶೋಧಮ್ಮ , ಉಪ ಮೇಯರ್ ಸೌಮ್ಯ ಎಸ್.ನರೇಂದ್ರ ಕುಮಾರ್, ದಾವಣಗೆರೆ ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್ ಶಿವಕುಮಾರ್, ಬಿಜೆಪಿ ಮುಖಂಡರಾದ ಎಸ್.ಎಂ.ವೀರೇಶ್, ಯಶವಂತರಾವ್ ಜಾಧವ್, ಇತರರು ಹಾಜರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top