ದಾವಣಗೆರೆ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಪರಿಣಾಮ ನೋಡು ನೋಡುತ್ತಿದ್ದಂತೆ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ದಾವಣಗೆರೆ: ನಗರಸಭೆಯಲ್ಲಿ ಖಾಸಗಿ ನೌಕರರಿಗೆ ಸರ್ಕಾರಿ ನೌಕರರಂತೆ ಸೌಲಭ್ಯ – 7 ಮಂದಿ ವಿರುದ್ಧ ಪ್ರಕರಣ ದಾಖಲು
ಇಂದು (ಏ.10) ಬೆಳಗಿನ ನಸುಕಿನಲ್ಲಿ ಈ ಘಟನೆ ನಡೆದಿದೆ. ಕಾರೊನಲ್ಲಿದ್ದ ಮಂಡ್ಯ ಲೋಕಾಯುಕ್ತ ಇನ್‌ಸ್ಪೆಕ್ಟರ್ ಹನುಮಂತಪ್ಪ ಸೇರಿ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕುಂದುವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಕಾರಿನ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಜಾರು ಚಾಲಕ ತಕ್ಷಣ ಕಾರು ನಿಲ್ಲಿಸಿ ಎಲ್ಲರನ್ನು ಕೆಳಗೆ ಇಳಿದಿದ್ದಾರೆ. ಆಗ ನೋಡು ನೋಡುತ್ತಿದ್ದಂತೆ ಬೆಂಕಿ ಇಡೀ ಕಾರನ್ನು ಆವರಿಸಿಕೊಂಡಿದೆ. ಬೆಂಕಿಗೆ ಇಡೀ ಕಾರನ್ನು ಆವರಿಸಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಲೋಕಾಯುಕ್ತ ಇನ್‌ಸ್ಪೆಕ್ಟರ್ ಹನುಮಂತಪ್ಪ, ಮದ್ದೂರು ಪುರಸಭಾ ಸದಸ್ಯ ಸಿದ್ದರಾಜು, ಉದ್ಯಮಿ ಚೇತನ್, ಪ್ರಮೋದ್ ಹಾಗೂ ಕೃಷ್ಣಪ್ಪ ಎಂಬುವರು ಮದ್ದೂರಿನಿಂದ ಹುಬ್ಬಳ್ಳಿಗೆ ಕಾರಿನಲ್ಲಿ ತೆರಳುತ್ತಿದ್ದರು.