ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿಗೆ ಕ್ರೀಡಾ ವಸತಿ ಶಾಲೆ ಅಥವಾ ನಿಲಯಗಳಿಗೆ 8ನೇ ತರಗತಿ, ಪ್ರಥಮ ಪಿ.ಯು.ಸಿ. ಮಟ್ಟದ ಅರ್ಹ ಕ್ರೀಡಾಪಟುಗಳನ್ನು ಜಿಲ್ಲಾ ಹಾಗೂ ವಿಭಾಗ ಮಟ್ಟದಲ್ಲಿ ಈಗಾಗಲೇ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಇದೇ ಏಪ್ರಿಲ್ 15 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ “ವಿಶೇಷ ಆಯ್ಕೆ ಶಿಬಿರ” ಆಯೋಜನೆ ಮಾಡಲಾಗಿದೆ.
ಪ್ರವೇಶ ಬಯಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಏ.15 ರ ಬೆಳಿಗ್ಗೆ 9.30 ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಬಡ್ಡಿ ಮತ್ತು ಕುಸ್ತಿ ಕ್ರೀಡೆಗಳ “ವಿಶೇಷ ಆಯ್ಕೆ ಶಿಬಿರ” ದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08192-237480ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.