ಬೆಂಗಳೂರು: ಕನ್ನಡದ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್(76) ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ರಾತ್ರಿ 2.30ಕ್ಕೆ ನಿಧನ ಹೊಂದಿದ್ದಾರೆ.
1985ರಲ್ಲಿ ಪಿತಾಮಹ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ಅವರು ನಟಿಸಿದ್ದರು.500ಕ್ಕೂ ಅಧಿಕ ಸಿನಿಮಾಗಳಲ್ಲಿ ಜನಾರ್ಧನ್ ನಟಿಸಿದ್ದಾರೆ.
1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ್ದ ಬ್ಯಾಂಕ್ ಜನಾರ್ಧನ್ ತಮ್ಮ ವಿದ್ಯಾಭ್ಯಾಸ ಬೆಂಗಳೂರಿನಲ್ಲಿಯೇ ಪೂರೈಸಿದ್ದರು. ರಂಗಭೂಮಿ ಕಲಾವಿದರಾಗಿ ದೊಡ್ಡ ಮಟ್ಟದ ಹೆಸರು ಗಳಿಸಿದ್ದ ಅವರು, ಕನ್ನಡದ 60ಕ್ಕೂ ಅಧಿಕ ಚಿತ್ರಗಳು ಹಾಗೂ ಟಿವಿ ಸಿರಿಯಲ್‌ಗಳಲ್ಲಿ ನಟಿಸಿ ಜನಪ್ರಿಯರಾಗಿದ್ದರು.
ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿದ ದೊಡ್ಡಣ್ಣ, ಟೆನ್ನಿಸ್ ಕೃಷ್ಣ ಅವರ ಸಮಕಾಲೀನರು ಅವರೊಂದಿಗೆ ಮಾತ್ರವಲ್ಲದೆ, ನಂತರ ಬಂದ ಸಾಧುಕೋಕಿಲ, ಬುಲೆಟ್ ಪ್ರಕಾಶ್ ಸೇರಿದಂತೆ ಇನ್ನೂ ಹಲವರೊಂದಿಗೆ ನಟಿಸಿ ತಮ್ಮ ಛಾಪು ಮೂಡಿಸಿದ್ದರು.