ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಮೂರ್ನಾಲ್ಕು ದಿನ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಏ.14) ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ , ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 34°C ಮತ್ತು 21°C ಇರಲಿದೆ



