ದಾವಣಗೆರೆ: ಲಿಂಗಾಯತ, ಒಕ್ಕಲಿಗ ಸಮುದಾಯ ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ? ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (shamanur shivashankarappa) ತಮ್ಮ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಾಗೂ ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತಾ? ಅವರು ಸುಮ್ಮನೇ ವರದಿ ಬಿಡುಗಡೆ ಮಾಡುತ್ತೇವೆ ಅಂತ ಹೇಳುತ್ತಿದ್ದಾರೆ. ರಾಜ್ಯದಲ್ಲಿ ಫಸ್ಟ್ ಲಿಂಗಾಯತರು, ಸೆಕೆಂಡ್ ಒಕ್ಕಲಿಗರು ಇದ್ದೇವೆ. ಸರ್ಕಾರ ನಮ್ಮನ್ನು ಎದುರಾಕಿಕೊಂಡು ರಾಜ್ಯಾಭಾರ ಮಾಡಲು ಆಗುತ್ತಾ? ಲಿಂಗಾಯತರು, ಒಕ್ಕಲಿಗರು ಇಬ್ಬರು ಒಗ್ಗೂಡಿ ಹೋರಾಟ ಮಾಡುತ್ತೇವೆ. ಈ ಬಗ್ಗೆ ವೀರಶೈವ ಲಿಂಗಾಯತ ಮಹಾಸಭಾ ಈಗಾಗಲೇ ಸಭೆ ನಡೆಸಿದೆ ಎಂದು ಎಂದರು.



