ಶಿವಮೊಗ್ಗ: ಪಿಯುಸಿ ನಂತರ ವಿವಿಧ ವೃತ್ತಿಪರ ಕೋರ್ಸ್ಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಯೋಜಿಸಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ ಆರೋಪ ಹಿನ್ನೆಲೆ ಅಧಿಕಾರಿಯನ್ನು ಅಮಾನತು (suspension) ಮಾಡಲಾಗಿದೆ.ಈ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರವೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿ ಬಂದಿದೆ. ಇದಕ್ಕೆ ಬ್ರಾಹ್ಮಣ ಸಚಿವರು, ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇದೀಗ ಪರೀಕ್ಷಾ ಕೇಂದ್ರದ ಅಧಿಕಾರಿಯನ್ನು ತಕ್ಷಣವೇ ಅಮಾನತು ಮಾಡುವಂತೆ ಡಿಸಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆದೇಶ ಹೊರಡಿಸಿದ್ದಾರೆ.
ಬೀದರ್ನಲ್ಲಿಯೂ ಇದೇ ರೀತಿ ಪ್ರಕರಣ ವರದಿಯಾಗಿದ್ದು, ಅಧಿಕಾರಿಯನ್ನು ಸಸ್ಪೆಂಡ್ ಮಾಡುವಂತೆ ಒತ್ತಾಯಿಸಿದ್ದಾರೆ. ಅಮಾನತು ಮಾಡುವುದು ಮಾತ್ರವಲ್ಲ ಕ್ಷಮೆಯಾಚಿಸಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ ಸರ್ಕಾರಕ್ಕೆ ಆಗ್ರಹಿಸಿದೆ.



