ದಾವಣಗೆರೆ: ಪ್ರಸಕ್ತ ಸಾಲಿಗೆ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ 6 ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲು ದಾವಣಗೆರೆ ಜಿಲ್ಲೆ ವ್ಯಾಪ್ತಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ.3 ರೊಳಗಾಗಿ ವೆಬ್ಸೈಟ್ https://swd.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸಲು ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ನಾಗರಾಜ ತಿಳಿಸಿದ್ದಾರೆ.
ಪ್ರಮುಖ ದಿನಾಂಕ
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಾರಂಭಿಕ ದಿನಾಂಕ :15-04-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-05-2025
- ಅರ್ಜಿಗಳ ಪರಿಶೀಲನೆ 05-05-2025
- ಪ್ರವೇಶ ಪರೀಕ್ಷೆ 09-05-2025
- ಪ್ರವೇಶ ಪರೀಕ್ಷೆ ಫಲಿತಾಂಶ ಘೋಷಣೆ 13-05-2025
- ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ 17-05-2025
- ಆಯ್ಕೆಯಾದ ಶಾಲೆಗೆ ದಾಖಲಾಗಲು ಕೊನೆಯ ದಿನಾಂಕ 31-05-2025



