ಡಿವಿಜಿ ಸುದ್ದಿ, ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ತಕ್ಷಣ ಅಧಿಸೂಚನೆ ಹೊರಡಿಸುವಂತೆ ಫೆ. 26 ರಂದು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ನಮ್ಮ ಜೊತೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧದ್ದು, ನೆರೆಯ ಗೋವಕ್ಕೆ ಅನ್ಯಾಯವಾಗಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ಯೋಜನೆಗೆ 200 ಕೋಟಿ ಕೊಡುತ್ತೇನೆಂದು ಮುಖ್ಯಮಂತ್ರಿಯವರು ಈಗಾಗಲೇ ಭರವಸೆ ನೀಡಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಮಹದಾಯಿ ಉಗಮಸ್ಥಳ ಖಾನಾಪುರದ ಕಣಕುಂಬಿ ಭೇಟಿ ನೀಡುತ್ತೇನೆ. ಇದಲ್ಲದೆ ಕೃಷ್ಣಾ, ಕಾವೇರಿ ನದಿ ನೀರು ಹಂಚಿಕೆ ಕುರಿತು ಮಾಹಿತಿ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದರು.



