ದಾವಣಗೆರೆ: ಬೊಗಳೆ ಬಿಡಬೇಡಿ, ಇಂದಿರಾ ಗಾಂಧಿ ರೀತಿ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಚಿವ ಈಶ್ವರ ಖಂಡ್ರೆ ವಾಗ್ದಾಳಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಾಕಿಸ್ತಾನ ವಿರುದ್ಧ ಇಂದಿರಾ ಗಾಂಧಿ ದಿಟ್ಟ ನಿರ್ಧಾರ ಕೈಗೊಂಡಿದ್ದರು.ಅದೇ ರೀತಿ ಈಗಿನ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಪಾಕಿಸ್ತಾನದ ಮೇಲೆ ಯುದ್ಧ ಕುರಿತು ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.
ಸಂಸತ್ತಿನ ಮೇಲೆ ದಾಳಿ ಸೇರಿ ಸಾಲು ಸಾಲು ಭಯೋತ್ಪಾದಕ ದಾಳಿ ಆಗಿದ್ದು, ಬಿಜೆಪಿ ಸರ್ಕಾರದಲ್ಲಿಯೇ. ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಾತಾಡುವ ನೈತಿಕತೆ ಇಲ್ಲ ಎಂದರು.
ಕೇಂದ್ರ ಸರ್ಕಾರದ ಜಾತಿ ಗಣತಿ ನಿರ್ಧಾರಕ್ಕೆ ಸ್ವಾಗತ
ಜಾತಿ ಗಣತಿ ಈಗ ಸಂಪುಟದ ಮುಂದೆ ಬಂದಿದೆ. 9ನೇ ತಾರೀಖಿನಂದು ಸಂಪುಟ ಸಭೆ ನಡೆಯಲಿದೆ. ಅಕ್ಲಿ ನಮ್ಮ ನಿಲುವು ಸ್ಪಷ್ಟಪಡಿಸುವೆ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲು ಮುಂದಾಗಿದೆ. ಕೇಂದ್ರದ ನಿರ್ಧಾರವನ್ನು ಸ್ವಾಗತಿಸುವೆ ಎಂದರು.



