ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜು ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ (residential college Karnataka) ಪ್ರಥಮ ಪಿ.ಯು.ಸಿ ಪಿ.ಸಿ.ಎಂ.ಬಿ(ವಿಜ್ಞಾನ ವಿಭಾಗ) ವಿಷಯಗಳಿಗೆ ದಾಖಲಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಪೋಷಕರ ಆದಾಯ ಮಿತಿ ರೂ.2.50 ಲಕ್ಷಗಳಿಗೆ ಮೀರಬಾರದು
ಈ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುವುದು. ಈ ಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ,ಕ್ರಿಶ್ಚಿಯನ್,ಜೈನ್,ಸಿಖ್, ಬೌದ್ಧ,ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75% ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25%ರಷ್ಟು ಪ್ರವೇಶ ಲಭ್ಯವಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ದಾಖಲಾತಿಗಾಗಿ ಪೋಷಕರ ಆದಾಯ ಮಿತಿ ರೂ.2.50 ಲಕ್ಷಗಳಿಗೆ ಮೀರಬಾರದು.
ಅಭ್ಯರ್ಥಿಗಳು ಮೇ.31 ರೊಳಗಾಗಿ ಸೇವಾ ಸಿಂಧು ಪೋರ್ಟಲ್ Website: https://sevasindhu services.karnataka.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ದೂರವಾಣಿ ಸಂ:08192-250022 ಸಂಪರ್ಕಿಸಿ.
ಕಾಲೇಜುಗಳ ವಿವರ
- ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು, ಕೊಂಡಜ್ಜಿ,ಹರಿಹರ ತಾ|| ಮೊ:9008815296
- ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ಬಾಲಕಿಯರ ವಸತಿ ಶಾಲೆ, ಹೊಸ ಕುಂದುವಾಡ ಗ್ರಾಮ, ಎನ್.ಹೆಚ್-13 ರಸ್ತೆ, ದಾವಣಗೆರೆ. ಮೊ:9916828601
- ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಕಾಲೇಜು ಕೆರೆಬಿಳಚಿ, ಚನ್ನಗಿರಿ ತಾ|| ಮೊ:9483075634, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಬೀಡಿ ಲೇಔಟ್, ದಾವಣಗೆರೆ ಮೊ:7022234663 ಸಂಪರ್ಕಿಸಲು ಇಲಾಖೆಯ ಅಧಿಕಾರಿ ಭಕ್ತ ಮಾರ್ಕಂಡೇಯ ತಿಳಿಸಿದ್ದಾರೆ.



