ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಪ್ರಸಕ್ತ ಸಾಲಿನ ಆಸ್ತಿ ತೆರಿಗೆಯನ್ನು ಮೇ ಮತ್ತು ಜೂನ್ ತಿಂಗಳಲ್ಲಿ ಪಾವತಿಸಿದ್ರೆ ಶೇ.5ರಷ್ಟು ರಿಯಾಯಿತಿ ಸಿಗಲಿದೆ.
ರಿಯಾಯಿತಿ ಪಡೆಯಲು ವೆಬ್‌ಸೈಟ್ http://davangerecitycorp.org ಲಿಂಕ್ ನ ಮೂಲಕ ಯು.ಪಿ.ಐ ಉಪಯೋಗಿಸಿಕೊಂಡು ಆಸ್ತಿ ತೆರಿಗೆ ಪಾವತಿಸಲು ಅವಕಾಶ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ನೀರು ಬಳಕೆ ಶುಲ್ಕ, ಯುಜಿಡಿ ಶುಲ್ಕ, ಮಳಿಗೆ ಬಾಡಿಗೆ ಮತ್ತು ಟ್ರೇಡ್ ಲೈಸೆನ್ಸ್ ಶುಲ್ಕವನ್ನು ಪಾವತಿಸಬಹುದು ಎಂದು ಪಾಲಿಕೆ ಆಯುಕ್ತ ರೇಣುಕಾ ತಿಳಿಸಿದ್ದಾರೆ.



