Connect with us

Dvgsuddi Kannada | online news portal | Kannada news online

ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ‌ 2 ಸಾವಿರ ಹೆಚ್ಚಳ

guests lecture

ಪ್ರಮುಖ ಸುದ್ದಿ

ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ‌ 2 ಸಾವಿರ ಹೆಚ್ಚಳ

ಬೆಂಗಳೂರು: ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಮಾಸಿಕ ಗೌರವಧನವನ್ನು ತಲಾ 2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವಧನ ಜಾರಿಯಲ್ಲಿರಲಿದೆ ‌ಇರಲಿದೆ. ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವಧನ ನಂತರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ಆಗಲಿದೆ.

ಇನ್ನೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2,000 ಗಳಷ್ಟು ಗೌರವಧನ ಹೆಚ್ಚಳವಾಗಲಿದೆ. ಪರಿಷ್ಕೃತ ಗೌರವಧನ ನಂತರ 14,000 ರೂ. ಆಗಲಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top