ದಾವಣಗೆರೆ: ವಿಜಯನಗರ ಜಿಲ್ಲೆ ಹೊಸಪೇಟೆ ನಗರದಲ್ಲಿ ನಾಳೆ (ಮೇ.20) ಕಾಂಗ್ರೆಸ್ ಸರ್ಕಾರದ ಸಧನಾನಸಮಾವೇಶ ನಡೆಯಲಿದೆ. ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆದುಕೊಂಡು ಹೋಗಲು ದಾವಣಗೆರೆ ವಿಭಾಗದ ವತಿಯಿಂದ ಸುಮಾರು 200 ಬಸ್ಸುಗಳನ್ನು ನಿಯೋಜನೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ದಿನದಂದು ಸಂಸ್ಥೆಯ ಬಸ್ಸುಗಳ ಸೇವೆ ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿಲ್ಲದ ಕಾರಣ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಸಾರಿಗೆ ಸೇವೆಯಲ್ಲಿ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕಾಗಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.



