ಹರಿಹರ: ನಗರದ ಎಸ್ ಜೆ ವಿಪಿ ಪದವಿ ಕಾಲೇಜಿನಲ್ಲಿ ನಾಳೆ (ಮೇ 3) ಬೆಳಗ್ಗೆ 9.30ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬೇಕೆಂದು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್.ಎಚ್. ಶಿವಗಂಗಮ್ಮ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್.ಜೆ.ವಿ.ಪಿ. ಪದವಿ ಕಾಲೇಜು 2 ವರ್ಷಗಳಿಂದ ಉದ್ಯೋಗ ಮೇಳ ಯಶಸ್ವಿಯಾಗಿ ಆಯೋಜಿಸುತ್ತಿದೆ. ಇದರಿಂದ ಅನೇಕ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಈ ವರ್ಷ ಕಾಲೇಜಿನ ವಿದ್ಯಾರ್ಥಿಗಳ ಜೊತೆಗೆ ಹರಿಹರ ತಾಲೂಕಿನ ಉದ್ಯೋಗ ಆಕಾಂಕ್ಷಿಗಳಿಗಾಗಿ ಈ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಮೇಳದಲ್ಲಿ ರಾಜ್ಯದ ಮತ್ತು ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಯಾವುದೇ ಡಿಗ್ರಿ, ಡಿಪ್ಲೊಮಾ, ಪಿಜಿ ಕೋರ್ಸ್‌ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗಿದೆ.
ಮೇಳದಲ್ಲಿ ಭಾಗವಹಿಸುವವರು ವಿದ್ಯಾಭ್ಯಾಸದ ಅಗತ್ಯ ಮೂಲ ದಾಖಲಾತಿಗಳೊಂದಿಗೆ (ಜೆರಾಕ್ಸ್ 3 ಸೆಟ್), 2 ಭಾವಚಿತ್ರ (ಪಾಸ್‌ಪೋರ್ಟ್ ಅಳತೆ) ಮತ್ತು ಆಧಾರ್ ಕಾರ್ಡ್‌ನೊಂದಿಗೆ ನಿಗದಿತ ಸಮಯಕ್ಕೆ ಆಗಮಿಸಬೆಕ. ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ಮೊ. 9663901541, 8747975615 ಸಂಪರ್ಕಿಸಲು ಕೋರಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಡಾ. ರಮೇಶ್ ಕೆ. ಪರ್ವತಿ, ಡಾ. ವೀರಣ್ಣ ಶೆಟ್ಟರ್, ಭರ್ಮಪ್ಪ ಟಿ. ಉಪಸ್ಥಿತರಿದ್ದರು.



