ದಾವಣಗೆರೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ದಾವಣಗೆರೆ ಮತ್ತು ಹರಿಹರ ಶಿಶು ಅಭಿವೃಧ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ, ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಹೊರಡಿಸಿದ 7 ದಿನಗಳ ಓಳಗಾಗಿ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕುವೆಂಪು ನಗರ, ಎಂ.ಸಿ.ಸಿ.‘ಬಿ’ ಬ್ಲಾಕ್, 14ನೇ ಮುಖ್ಯರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಇಲಾಖೆ ಅಧಿಕಾರಿ ರಾಜಾನಾಯ್ಕ ತಿಳಿಸಿದ್ದಾರೆ.
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಪ್ರಸಕ್ತ ಸಾಲಿನಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ 9 ಮತು 10 ನೇ ತರಗತಿ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಸ್ಕಾಲರ್ ಶಿಪ್ ಪೋರ್ಟಲ್‍ನಲ್ಲಿ ಒನ್‍ಟೈಂ ಪಾಸ್‍ವರ್ಡ್ ಸೃಜನೆ ಮಾಡಿ ನೊಂದಣಿ ಮಾಡಿದ ನಂತರ ರಾಜ್ಯ ವಿದ್ಯಾರ್ಥಿ ವೇತನದ ತಂತ್ರಾಂಶದಲ್ಲಿ ಎಸ್‍ಎಸ್‍ಪಿ ಅರ್ಜಿ ಸಲ್ಲಿಸಬೇಕೆಂದು ಜಗಳೂರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.



