ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಎರಡು ವರ್ಷಗಳ ಐ.ಟಿ.ಐ, ದ್ವಿತೀಯ ಪಿಯುಸಿ(ವಿಜ್ಞಾನ), ದ್ವಿತಿಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ, 3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸುಗಳಿಗೆ ಆಫ್-ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜೂನ್ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರಾರು, ಸರ್ಕಾರಿ ಡಿ.ಆರ್.ಆರ್ ಪಾಲಿಟೆಕ್ನಿಕ್‍ನ್ನು ಸಂಪರ್ಕಿಸಲು ತಿಳಿಸಿದೆ.
ಟಾಸ್ಕ್ ಪೋರ್ಸ್ ಸಮಿತಿ ಸಭೆ
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜೂನ್ 3 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿಣಿ ಸಮಿತಿ ಹಾಗೂ ಟಾಸ್ಕ್ ಪೋರ್ಸ್ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.



