Connect with us

Dvgsuddi Kannada | online news portal | Kannada news online

ದಾವಣಗೆರೆ: ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

school 1

ದಾವಣಗೆರೆ

ದಾವಣಗೆರೆ: ವಸತಿ ಶಾಲೆಗಳಿಗೆ ಅತಿಥಿ ಶಿಕ್ಷಕ, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 22 ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿಗೆ 6 ರಿಂದ 10ನೇ ತರಗತಿ (ವಸತಿ ಶಾಲೆ) ಹಾಗೂ ಪದವಿ ಪೂರ್ವ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು, ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರು (guest teacher), ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ; ಅರ್ಹತೆ

ಕನ್ನಡ, ಇಂಗ್ಲೀಷ್, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಉಪನ್ಯಾಸಕರ ತಲಾ 1 ಹುದ್ದೆಗಳಿಗೆ ಎಂ.ಎ, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು. ಗಣಕವಿಜ್ಞಾನ ಉಪನ್ಯಾಸಕರ ಹುದ್ದೆಗೆ ಎಂಎಸ್ಸಿ ಕಂಪ್ಯೂಟರ್ ಸೈನ್ಸ್, ಎಂ.ಸಿ.ಎ, ಬಿ.ಇ & ಸಿ.ಎಸ್ &ಐ.ಎಸ್ ಮತ್ತು ಶಿಕ್ಷಕರ ಹುದೆಗಳಾದ ಕನ್ನಡ, ಆಂಗ್ಲ, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಶಿಕ್ಷಕರು ಸಂಬಂಧಿಸಿದ ವಿಷಯದಲ್ಲಿ ಪದವಿ ಮತ್ತು ಬಿ.ಇಡಿ(ಟಿ.ಇ.ಟಿ ಉತ್ತೀರ್ಣರಾದವರಿಗೆ ಮೊದಲ ಆದ್ಯತೆ), ಗಣಕ ವಿಜ್ಞಾನ ಶಿಕ್ಷಕರು ಪದವಿ ಬಿ.ಎಸ್ಸಿ, ಬಿಸಿಎ, ಬಿ.ಇ, ದೈಹಿಕ ಶಿಕ್ಷಣ ಶಿಕ್ಷಕರು ಬಿ.ಪಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು.

ಕೊನೆ ದಿನ ಯಾವಾಗ.?

ಅರ್ಹರು ಅರ್ಜಿ ಹಾಗೂ ದೃಢೀಕರಿಸಿದ ದಾಖಲೆಗಳ ಪ್ರತಿಗಳನ್ನು ಜೂನ್ 18 ರ ಒಳಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಜಂಟಿ ನಿರ್ದೇಶಕರಾದ ನಾಗರಾಜ.ಕೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top