ಡಿವಿಜಿ ಸುದ್ದಿ, ದಾವಣಗೆರೆ: ಫೆ 27 ರಂದು ಅನುಪಮ ವಿರುಪಾಕ್ಷಪ್ಪ ಅವರು ಬರೆದಿರುವ ಬೆಳಕಿನೆಡೆಗೆ ಕೃತಿ ಲೋಕಾರ್ಪಣೆ ಸಮಾರಂಭ ನಡೆಯಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನುಪಮ ವಿರುಪಾಕ್ಷಪ್ಪ, ಎ.ವಿ. ಪ್ರಕಾಶನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಿದ್ದು, ನಗರದ ಕುವೆಂಪು ಕನ್ನಡ ಭವನದಲ್ಲಿ ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಮಹಾಂತೆಶ್ ಬೀಳಗಿ ಅವರು ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ ಎಂದರು.
ಕೃತಿಯ ಕುರಿತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಎಸ್. ಟಿ. ಶಾಂತಗಂಗಾಧರ್ ಮಾತನಾಡಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್. ಎಸ್. ಮಂಜುನಾಥ್ ಕುರ್ಕಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಹಿತಿ ಕತ್ತಿಗೆ ಚನ್ನಪ್ಪ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.



