Connect with us

Dvgsuddi Kannada | online news portal | Kannada news online

ದಾವಣಗೆರೆ: ಜೂ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ವೇಳಾಪಟ್ಟಿ ಇಲ್ಲಿದೆ..

cm siddaramaih

ದಾವಣಗೆರೆ

ದಾವಣಗೆರೆ: ಜೂ.16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ವೇಳಾಪಟ್ಟಿ ಇಲ್ಲಿದೆ..

ದಾವಣಗೆರೆ: ರಾಜ್ಯದ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯನವರು ಜೂನ್ 16 ರ ಬೆಳಿಗ್ಗೆ 11.15ಕ್ಕೆ ಹೆಲಿಕ್ಯಾಪ್ಟರ್ ಮೂಲಕ ದಾವಣಗೆರೆ ನಗರದ ಎಂಬಿಎ ಕಾಲೇಜು ಆವರಣದ ಹೆಲಿಪ್ಯಾಡ್‍ಗೆ ಆಗಮಿಸುವರು. ನಂತರ ಶಾಮನೂರು ಶಿವಶಂಕರಪ್ಪನವರ 95ನೇ ಹುಟ್ಟು ಹಬ್ಬದ ಪ್ರಯುಕ್ತ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸಿರುವ ಉಚಿತ ಮತ್ತು ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸುವರು.

ಮಧ್ಯಾಹ್ನ 12 ಗಂಟೆಗೆ ಆರ್.ಎಂ.ಸಿ. ಲಿಂಕ್ ರಸ್ತೆಯಲ್ಲಿನ ಶ್ರೀ ಕಲ್ಲೇಶ್ವರ ಇಂಡಸ್ಟ್ರೀಸ್ ಆವರಣದಲ್ಲಿ ಆಧುನಿಕ ತಂತ್ರಜ್ಞಾನದ ನೂತನ ತೊಗರಿಬೇಳೆ ಹಾಗೂ ಕಡ್ಲೇಬೇಳೆ ಮಿಲ್‍ಗಳ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ 12.45 ಕ್ಕೆ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿರುವ ದಾವಣಗೆರೆ ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 4 ಗಂಟೆಗೆ ಎಂಬಿಎ ಕಾಲೇಜು ಆವರಣದಿಂದ ಹೆಲಿಕ್ಯಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top