ದಾವಣಗೆರೆ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ. 1,75,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ.
ದಿನಾಂಕ:19.06.2025 ರಂದು ದಾವಣಗೆರೆ ಶಿರಮಗೊಂಡನಹಳ್ಳಿಗೆ ಹೋಗುವ ಬ್ರೀಡ್ಜ್ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಜಾಲದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಎಸ್ಪಿ ಉಮಾಪ್ರಶಾಂತ್, ಎಎಸ್ಪಿ ಮಂಜುನಾಥ ಜಿ , ಡಿವೈಎಸ್ಪಿ ಪದ್ಮಶ್ರೀ ಗುಂಜೀಕರ್ ಮಾರ್ಗದರ್ಶನದಲ್ಲಿ, ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವಸಂತ್.ಹೆಚ್ ಹಾಗೂ ಸಿಬ್ಬಂದಿಯವರಾದ ಲೋಹಿತ್ ಎಸ್, ಮುತ್ತುರಾಜ್, ಮಲ್ಲಿಕಾರ್ಜುನ ಹಾದಿಮನಿ, ಅಶೋಕ್, ಬುಡೇನ್ ವಲಿ, ಯೋಗೇಶ ನಾಯ್ಕ ಒಳಗೊಂಡ ತಂಡ ದಾಳಿ ಮಾಡಿದೆ. ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿ ಮನ್ಸೂರ್ ಅಲಿ(27) ಚನ್ನಗಿರಿ, ದಾವಣಗೆರೆ ಜಿಲ್ಲೆ ಹಾಗು ಸಂಜಯ್ ಕುಮಾರ ಸಿ.ಕೆ (22 ) ಚನ್ನಗಿರಿ, ದಾವಣಗೆರೆ ಜಿಲ್ಲೆ ಇವರನ್ನು ದಸ್ತಗಿರಿ ಮಾಡಲಾಗಿದೆ.
ಆರೋಪಿಗಳಿಂದ ಸುಮಾರು 1,75,000/- ರೂ ಬೆಲೆಯ 2 ಕೆಜಿ 360 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ದಾವಣಗೆರೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಎಸ್ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.