ದಾವಣಗೆರೆ: ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.



